ಸಮುದಾಯದವರು ಒಗ್ಗೂಡಬೇಕು : ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಕರೆ

Sri Mohandas Paramahamsa Swamiji
Published on

ಮೈಸೂರು: ಸಮುದಾಯದ ಅಭಿವೃದ್ಧಿಗೆ ಪ್ರತಿಯೊಬ್ಬರು ಒಗ್ಗೂಡಬೇಕು ಎಂದು ಶ್ರೀ ಮಾಣಿಲ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಕರೆ ನೀಡಿದರು.

ಕುಲಾಲಗುಂಡ ಬ್ರಹ್ಮಾರ್ಯ ಕುಂಬಾರರ ಸಂಘ ವತಿಯಿಂದ ನಗರದ ಡಿ.ಬನುಮಯ್ಯ ರಸ್ತೆಯಲ್ಲಿ ಪ್ರಾರಂಭಿಸಿರುವ ವಧು- ವರರ ಮಾಹಿತಿ ಕೇಂದ್ರ ಉದ್ಘಾಟಿಸಿ ಮಾತನಾಡಿ, ಕುಲಾಲಗುಂಡ ಬ್ರಹ್ಮಾರ್ಯ ಕುಂಬಾರರ ಸಂಘ ಸಮುದಾಯವನ್ನು ಒಗ್ಗೂಡಿಸುವ ಕಾರ್ಯವನ್ನು ಉತ್ತಮವಾಗಿ ಮಾಡಿದ್ದು, ಈ ಕಾರ್ಯ ಇದೇ ರೀತಿಯಲ್ಲಿ ಮುಂದುವರೆಯಬೇಕು. ವಧು-ವರರ ಮಾಹಿತಿ ಕೇಂದ್ರ ಉತ್ತಮವಾಗಿ ನಡೆಯಲಿ ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಇಲಾಖೆ ನಿವೃತ್ತ ಮುಖ್ಯ ಇಂಜಿನಿಯರ್ ಆರ್. ಶ್ರೀನಿವಾಸ್, ಸಂಘದ ಅಧ್ಯಕ್ಷ ಎಚ್.ಎಸ್. ಪ್ರಕಾಶ್, ಉಪಾಧ್ಯಕ್ಷ ಕೆ.ಪಿ. ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಕೆ.ಆರ್. ಸೋಮಶೇಖರ್, ಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ ರೇಣುಕಾಂಬ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net