ಮುಂದಿನ ಎಲ್ಲ ಚುನಾವಣೆಗಳಿಗೆ ದಿಕ್ಸೂಚಿ: ಸಚಿವ ಮಧು ಬಂಗಾರಪ್ಪ

minister madhu bangarappa
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
Published on

ಶಿವಮೊಗ್ಗ: ರಾಜ್ಯದಲ್ಲಿ ನಡೆಯುವ ಮುಂದಿನ ಎಲ್ಲ ಚುನಾವಣೆಗಳಿಗೂ ಶಿವಮೊಗ್ಗದಲ್ಲಿ ನಡೆಯುವ ಯುವನಿಧಿ ಜಾರಿ ಕಾರ್ಯಕ್ರಮ ದಿಕ್ಸೂಚಿ ಆಗಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸರ್ಕಾರದ ಐದನೇ ಗ್ಯಾರಂಟಿ ಯುವನಿಧಿ ಯೋಜನೆ ಜಾರಿ ಕುರಿತ ಜಿಲ್ಲಾಮಟ್ಟದ ಕಾಂಗ್ರೆಸ್ ಪ್ರಮುಖರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಯುವನಿಧಿ ಯೋಜನೆ ಜಾರಿ ಕಾರ್ಯಕ್ರಮವನ್ನು ಶಿವಮೊಗ್ಗದಲ್ಲಿ ಆಯೋಜನೆ ಮಾಡಬೇಕೆಂದು ಸಿಎಂ ಸಿದ್ದರಾಮಯ್ಯ ಅವರ ಬಳಿ ಹೇಳಿದ್ದೆ. ಅದಕ್ಕೆ ಅವರು ಒಪ್ಪಿಕೊಂಡಿದ್ದಾರೆ. ಶಿವಮೊಗ್ಗದಲ್ಲಿ ಇತಿಹಾಸ ಸೃಷ್ಟಿ ಮಾಡುತ್ತಾರೆಂಬ ಆಸೆಯನ್ನು ಸಿಎಂ ಹೊಂದಿದ್ದು ಕಾಂಗ್ರೆಸ್ ಶಕ್ತಿ ಪ್ರದರ್ಶಿಸಬೇಕಿದ್ದು ಐತಿಹಾಸಿಕ ಕಾರ್ಯಕ್ರಮ ಇದಾಗಬೇಕಿದೆ ಎಂದರು. ಸೋತಿರುವ ಕ್ಷೇತ್ರಗಳಲ್ಲಿ ಒಂದೊಂದು ತಂಡ ಮಾಡಿ ಮೇಲುಸ್ತುವಾರಿ ನೇಮಕ ಮಾಡಬೇಕಿದೆ ಎಂದು ಜಿಲ್ಲಾಧ್ಯಕ್ಷರಿಗೆ ಸಲಹೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net