ಸ್ವಾಧೀನ ಪಡಿಸಿಕೊಂಡ ಭೂಮಿಗೆ ಪರಿಹಾರ

30-05-Shiva-2
ರಾಯಚೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಅಧ್ಯಕ್ಷತೆಯಲ್ಲಿ ಗುರುವಾರ ಗಿಣಿಗೇರಾ-ರಾಯಚೂರು ಚತುಷ್ಪಥ ರಸ್ತೆಗಾಗಿ ಭೂಮಿ ಕಳೆದುಕೊಂಡ ರೈತರ ಸಭೆ ಜರುಗಿತು. ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ, ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್, ರೈತ ಮುಖಂಡರಾದ ಶರಣಬಸವ ಬೆಟ್ಟದೂರು, ಪ್ರಭಾಕರ್ ಪಾಟೀಲ್, ಬೂದಯ್ಯ ಸ್ವಾಮಿ ಇದ್ದರು.
Published on

ರಾಯಚೂರು: ಗಿಣಿಗೇರಾ-ರಾಯಚೂರು ರಾಜ್ಯ ಹೆದ್ದಾರಿಯನ್ನು ಚತುಷ್ಪಥ ರಸ್ತೆಯನ್ನಾಗಿ ಮೇಲ್ದರ್ಜೆಗೆ ಏರಿಸಲಾಗುತ್ತಿದ್ದು, ಅದಕ್ಕಾಗಿ ಅಗತ್ಯವಿರುವ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುವ ಕಾರ್ಯಕ್ಕೆ ಸಿದ್ಧತೆ ನಡೆದಿದೆ ಎಂದು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಹೇಳಿದರು.
ಸ್ಥಳೀಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಿಣಿಗೇರಾ-ರಾಯಚೂರು ಚತುಷ್ಪಥ ರಸ್ತೆಗಾಗಿ ಭೂಮಿ ಕಳೆದುಕೊಂಡ ರೈತರು ಹಾಗೂ ರೈತ ಮುಖಂಡರೊಂದಿಗೆ ಗುರುವಾರ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ರಸ್ತೆಯ ಎರಡು ಬದಿಯಲ್ಲಿ ತಲಾ 30 ಅಡಿ ಭೂಮಿ ಸ್ವಾದೀಣಕ್ಕೆ ಈಗಾಗಲೇ ಸರ್ವೇಯರ್ ನೇಮಕ ಮಾಡಲಾಗಿದೆ ಎಂದರು.
ಎಲ್ಲ ಪ್ರಕ್ರಿಯೆಗಳು ಮುಗಿಯಲು ಇನ್ನೂ ಏಳೆಂಟು ತಿಂಗಳು ಕಾಲಾವಕಾಶ ಬೇಕಾಗಲಿದ್ದು, ನಂತರ ಪರಿಹಾರ ನೀಡಲಾಗುತ್ತದೆ.
ಸಿಂಧನೂರಿನಿಂದ ರಾಯಚೂರುವರೆಗಿನ ರಸ್ತೆಯ ಎರಡು ಬದಿಯಲ್ಲಿ ಈಗಾಗಲೇ ಮಾರ್ಕಿಂಗ್ ಮಾಡಲಾಗಿದೆ. ಏಳು ಜನ ಸರ್ವೇಯರ್ ನೇಮಕ ಮಾಡಲಾಗಿದ್ದು, ಕೆಆರ್‌ಡಿಸಿಎಲ್ ಮತ್ತು ಸಂಬಂಸಿದಂದ ಇಲಾಖೆ ಅಕಾರಿಗಳೊಂದಿಗೆ ಎರಡು ಸುತ್ತಿನ ಸಭೆ ಮಾಡಲಾಗಿದೆ.
ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಅಂದಾಜು 1,273 ಕೋಟಿ ರೂ.ಗಳ ಯೋಜನೆ ರೂಪಿಸಲಾಗಿದ್ದು, ಇದರ ಜತೆಗೆ ಭೂ ಸ್ವಾೀನಪಟ್ಟ ಭೂಮಿಗೆ ಪರಿಹಾರ ನೀಡಲು ಪರಿಹಾರ ನೀಡಲು ಹಣವನ್ನು ನಿಗದಿಪಡಿಸಲಾಗಿದೆ. ಭೂಸ್ವಾೀನ ಕಾಯ್ದೆಯಡಿ ಪರಿಹಾರ ನಿಗದಿಪಡಿಸಲಾಗುತ್ತಿದೆ. ಪರಿಹಾಋ ಕುರಿತು ಮತ್ತೊಮ್ಮೆ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಲ್ಳಲಾಗುವುದು ಎಂದು ಚಂದ್ರಶೇಖರ ನಾಯಕ ತಿಳಿಸಿದರು.
ಸಭೆಯಲ್ಲಿ ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ, ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್, ರೈತ ಮುಖಂಡರಾದ ಶರಣಬಸವ ಬೆಟ್ಟದೂರು, ಪ್ರಭಾಕರ್ ಪಾಟೀಲ್, ಬೂದಯ್ಯ ಸ್ವಾಮಿ ಹಾಗೂ ರೈತರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net