ಚರ್ಮಗಂಟು ರೋಗದಿಂದ ಜಾನುವಾರು ಸತ್ತರೆ ಸಿಗಲಿದೆ ಪರಿಹಾರ

Catles
Published on

ಹಾವೇರಿ: ಚರ್ಮಗಂಟು ರೋಗದಿಂದ ಜಾನುವಾರುಗಳು ಮೃತಪಟ್ಟ ಪ್ರಕರಣದಲ್ಲಿ ಮಾಲೀಕ ರೈತರಿಗೆ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಬ್ಯಾಡಗಿ ತಾಲೂಕಿನ ಅರಬಗೊಂಡ ಗ್ರಾಮದಲ್ಲಿ ಗುರುವಾರ ಮೇಗಾ ಡೇರಿ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಹಸು ಮೃತಪಟ್ಟಲ್ಲಿ 20 ಸಾವಿರ ರೂ., ಎತ್ತು ಮೃತಪಟ್ಟ ಪ್ರಕರಣದಲ್ಲಿ 30 ಸಾವಿರ ರೂ. ಪರಿಹಾರ ಕೊಡಲು ತೀರ್ಮಾನಿಸಿದ್ದೇವೆ ಎಂದರು. ಚರ್ಮಗಂಟು ರೋಗ ನಿಯಂತ್ರಣಕ್ಕೆ ಬೇಕಾದ ಔಷಧ, ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸಾ ವೆಚ್ಚವನ್ನು

ಸಂಪೂರ್ಣವಾಗಿ ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net