ಸಮರ್ಥವಾದ ಸಂವಿಧಾನ ನೀಡಿದ ಧೀಮಂತ

xr:d:DAGCY52Rrew:2,j:263885418332230669,t:24041411
xr:d:DAGCY52Rrew:2,j:263885418332230669,t:24041411
Published on

ಕುರುಗೋಡು: ಅಸೃ ್ಪಶ್ಯತೆ ಮತ್ತು ಅಸಮಾನತೆ ವಿರುದ್ಧ ಆಂದೋಲನ ಪ್ರಾರಂಭಿಸಿ ಶೋಷಿತ ವರ್ಗಕ್ಕೆ ನ್ಯಾಯ ಒದಗಿಸಲು ಹೋರಾಟ ನಡೆಸಿದ ದೇಶದ ಮಹಾನಾಯಕ ಭಾರತ ರತ್ನ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಎಂದು ಗ್ರೇಡ್-2 ತಹಸೀಲ್ದಾರ್ ಮಲ್ಲೇಶಪ್ಪ ತಿಳಿಸಿದರು.

ಕುರುಗೋಡಿನ ತಹಸಿಲ್ ಕಚೇರಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 133ನೇ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ದೇಶಕ್ಕೆ ಸಂವಿಧಾನವನ್ನು ನೀಡಿ ಹಿಂದುಳಿದವರನ್ನು ಸಮಾಜದ ಮುಖ್ಯ ವಾಹಿನಿಗೆ ಕರೆತರುವುದೇ ಅವರ ಮೂಲ ಉದ್ದೇಶವಾಗಿತ್ತು ಎಂದರು.

ವಿವಿಧ ಸಂಸ್ಕೃತಿ ಧರ್ಮದವರು ನೆಲೆಸಿರುವ ಭಾರತ ದೇಶಕ್ಕೆ ಸಮರ್ಥವಾದ ಸಂವಿಧಾನವನ್ನು ಅಂಬೇಡ್ಕರ್ ನೀಡಿದ್ದಾರೆ. ಆದ್ದರಿಂದ ಅವರ ಮಾದರಿ ಬದುಕು ತತ್ವ ಚಿಂತನೆಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net