ಪಠ್ಯಕ್ಕಿಂತ ಅಭಿವೃದ್ಧಿ ಚಟುವಟಿಕೆಗೆ ಪೈಪೋಟಿ

kpcc spokeperson ayanur manjunath
ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ
Published on

ಶಿವಮೊಗ್ಗ: ವಿಶ್ವವಿದ್ಯಾಲಯಗಳಲ್ಲಿ ಪಠ್ಯಕ್ಕಿಂತ ಕಟ್ಟಡ ನಿರ್ಮಾಣ ಒಳಗೊಂಡಂತೆ ಅಭಿವೃದ್ಧಿ ಚಟುವಟಿಕೆಗಳಿಗೆ ಪೈಪೋಟಿ ಹೆಚ್ಚಾಗಿದೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ಆರೋಪ ಮಾಡಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಠ್ಯಕ್ಕಿಂತ ಪಠ್ಯೇತರ ಚಟುವಟಿಕೆಗಳಿಗೆ ಒತ್ತು ನೀಡಲಾಗುತ್ತಿದೆ. ತರಗತಿಗಳು ಶುರುವಾಗಿ ಎರಡು ತಿಂಗಳು ಕಳೆದರೂ ಅತಿಥಿ ಉಪನ್ಯಾಸರ ನೇಮಕ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಈ ಬಗ್ಗೆ ಉನ್ನತ ಶಿಕ್ಷಣ ಇಲಾಖೆಗೆ ಪ್ರಸ್ತಾವನೆಯನ್ನೇ ವಿವಿಗಳು ಇದುವರೆಗೂ ಕಳುಹಿಸಿಲ್ಲ. ವಿವಿಗಳ ಆಡಳಿತ ವ್ಯವಸ್ಥೆಯೇ ಕುಸಿದು ಹೋಗುತ್ತಿದೆ. ಅದರ ಪರಿಣಾಮವೇ ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net