ಕಮಲ ಪಕ್ಷದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ, ಮಾಜಿ ಸಚಿವ ಮುನೇನಕೊಪ್ಪ ಅವರಿಂದ ಅಭಿಪ್ರಾಯ ಸಂಗ್ರಹ

BJP KOR KAMEETI MEETING
ವಿಜಯಪುರ ನಗರದ ಬಿಜೆಪಿ ಕಾರ್ಯಾಲಯದಲ್ಲಿ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಕೋರ್ ಕಮೀಟಿ ಸಭೆ ನಡೆಸಿದರು. ಸಂಸದ ರಮೇಶ ಜಿಗಜಿಣಗಿ, ಆರ್.ಎಸ್. ಪಾಟೀಲ ಕುಚಬಾಳ ಮತ್ತಿತರರಿದ್ದಾರೆ.
Published on

ವಿಜಯಪುರ: ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ಆರಂಭಗೊಂಡಿದ್ದು, ಕೋರ್ ಕಮೀಟಿ ಸದಸ್ಯರ ಅಭಿಪ್ರಾಯದೊಂದಿಗೆ ಆಕಾಂಕ್ಷಿಗಳ ಪಟ್ಟಿ ಸಿದ್ಧಗೊಂಡಿದೆ.

ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ನೇತೃತ್ವ ಕೋರ್‌ಕಮೀಟ್ ಸದಸ್ಯರ ಸಭೆ ನಡೆಯಿತು. ಸಂಸದರು, ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳು ಮತ್ತು ಪಕ್ಷದ ಜಿಲ್ಲಾಧ್ಯಕ್ಷ ಸೇರಿದಂತೆ ಒಟ್ಟು 17 ಜನ ಕೋರ್‌ಕಮೀಟಿಯಲ್ಲಿದ್ದು, ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಅಲ್ಲದೇ, ಆಕಾಂಕ್ಷಿಗಳಿಂದ ಅರ್ಜಿ ಸ್ವೀಕರಿಸಿದ್ದು, ಇನ್ನೂ ಕೆಲವರು ಅರ್ಜಿ ಸಲ್ಲಿಸದೇ ಇದ್ದರೂ ಹೆಸರು ಪಡೆಯಲಾಗಿದೆ ಎಂದು ಸಭೆಯಲ್ಲಿದ್ದ ಸದಸ್ಯರು ತಿಳಿಸಿದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮುನೇನಕೊಪ್ಪ, ರಾಜ್ಯದಲ್ಲಿ ಈಗಾಗಲೇ ಜಿಲ್ಲಾಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದೆ. ವಿಜಯಪುರ ಜಿಲ್ಲಾಧ್ಯಕ್ಷರ ಆಯ್ಕೆ ಆಗಿಲ್ಲ. ಅದಕ್ಕಾಗಿ ಸಭೆ ನಡೆಸಲಾಗಿದೆ. ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಹತ್ತಕ್ಕೂ ಅಧಿಕ ಜನ ಮನವಿ ಮಾಡಿದ್ದಾರೆ. ಈ ಪಟ್ಟಿಯನ್ನು ರಾಜ್ಯ ಕಮೀಟಿಗೆ ನೀಡಲಾಗುವುದು. ಮುಂದಿನ ತೀರ್ಮಾನ ಅವರು ತೆಗೆದುಕೊಳ್ಳುತ್ತಾರೆಂದರು.

ಇನ್ನು ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಸೇರಿದಂತೆ ಉಳಿದ ಚುನಾವಣೆಗಾಗಿ ಬಿಜೆಪಿ ಸಂಘಟನೆ ಮಾಡುತ್ತಿದ್ದೇವೆ ಎಂದರು.

ಸಂಸದ ರಮೇಶ ಜಿಗಜಿಣಗಿ, ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ, ವಿಜುಗೌಡ ಪಾಟೀಲ, ರಮೇಶ ಭೂಸನೂರ, ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕುಚಬಾಳ, ವಿವೇಕಾನಂದ ಡಬ್ಬಿ, ಸಂಜೀವ ಐಹೊಳ್ಳಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net