ಉಜಿರೆಯಲ್ಲಿ ಸ್ಪರ್ಧೆ: ಬೆಂ. ನಗರ ವಿವಿಗೆ ರನ್ನರ್ ಅಪ್ ಪ್ರಶಸ್ತಿ

BCU runner up
Published on

ಬೆಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ಇತ್ತೀಚೆಗೆ ನಡೆದ ’ಆರೋಗ್ಯಕರ ನಾಳೆಗಾಗಿ ಹೂಡಿಕೆ’ ಸಮ್ಮೇಳನದ ಅಂಗವಾಗಿ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ತಂಡವು ರನ್ನರ್ ಅಪ್ ಸ್ಥಾನ ಪಡೆದಿದೆ.

ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ಅಜಯ್ ಕುಮಾರ್ ಪೋಸ್ಟರ್ ಮೇಕಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಮೈತ್ರಿ ಮತ್ತು ತಂಡದವರು ಸಮೂಹ ನೃತ್ಯದಲ್ಲಿ ಹಾಗೂ ರೂಪಾರಾಣಿ ಮತ್ತು ತಂಡದವರು ಫ್ಯಾಷನ್ ಷೋನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥೆ ಸ್ವಾತಿ ಹಾಗೂ ಬಿಸಿಯು ಸಮಾಜ ಕಾರ್ಯ ವಿಭಾಗದ ಅತಿಥಿ ಉಪನ್ಯಾಸಕ ವಿಕ್ರಮ್ ಕೆ. ಉಪಸ್ಥಿತರಿದ್ದರು.

ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ಸಮ್ಮೇಳನದಲ್ಲಿ ದೇಶದ ಹಲವಾರು ವಿಶ್ವವಿದ್ಯಾಲಯಗಳ ಮತ್ತು ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net