ಕೊಡ್ಲಿಪೇಟೆ ಡಿಗ್ರಿ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಸ್ಪರ್ಧೆ

11ss1udghatane
Published on

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹಲಸಿನಮರ ಗೌರಮ್ಮ ಶಾಂತಮಲ್ಲಪ್ಪ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಕಾಲೇಜಿನ ವಾಣಿಜ್ಯ, ಕಲಾ ಮತ್ತು ಬಿಸಿಎ ವಿಭಾಗದ ವತಿಯಿಂದ ಸಂಯುಕ್ತ 2ಕೆ25 ಸ್ಪರ್ಧಾತ್ಮಕ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು. ವಿದ್ಯಾಸಂಸ್ಥೆ ಉಪಾಧ್ಯಕ್ಷ ಸಿ.ವಿ.ಶಂಭುಲಿಂಗಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಪರ್ಧಾತ್ಮಕ ಕಾರ್ಯಕ್ರಮದ ಉದ್ದೇಶ, ಇದರಿಂದ ವಿದ್ಯಾರ್ಥಿಗಳಿಗೆ ಆಗುವ ಅನುಕೂಲ ಮುಂತಾದ ವಿಷಯಗಳ ಕುರಿತು ಕಾಲೇಜಿನ ಪ್ರಾಂಶುಪಾಲ ಎಂ.ಆರ್.ನಿರಂಜನ್ ಮಾಹಿತಿ ನೀಡಿದರು.

ವೇದಿಕೆಯಲ್ಲಿ ವಿದ್ಯಾಸಂಸ್ಥೆ ಗೌರವ ಕಾರ್ಯದರ್ಶಿ ಕೆ.ಎಸ್.ಪರಮೇಶ್, ವಿದ್ಯಾಸಂಸ್ಥೆ ನಿರ್ದೇಶಕರಾದ ಬಿ.ಕೆ.ಯತೀಶ್, ಯು.ವಿ.ಶಿವಪ್ರಸಾದ್ ಮುಂತಾದವರು ಹಾಜರಿದ್ದರು.

ಸ್ಪರ್ಧೆಯಲ್ಲಿ ಕೊಡಗಿನ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಾಣಿಜ್ಯ, ಕಲಾ ಮತ್ತು ಬಿಸಿಎ ವಿಭಾಗಕ್ಕೆ ಸಂಬಂಧ ಪಟ್ಟಂತೆ ನಡೆದ ಕಾರ್ಯಕ್ರಮದಲ್ಲಿ ಕೊಡ್ಲಿಪೇಟೆ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯ ಶಿಕ್ಷಕ ಡಿ.ಪಿ.ಸತೀಶ್, ಹಾಸನ ವಿದ್ಯಾಸೌಧ ಕಾಲೇಜಿನ ಉಪನ್ಯಾಸಕಿ ವೀಣಾ ಮಂಜುನಾಥ್, ಚಿಕ್ಕಳುವಾರ ಕೊಡಗು ವಿಶ್ವವಿದ್ಯಾಲಯದ ಉಪನ್ಯಾಸಕಿ ಗೀತಾಂಜಲಿ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net