

ಕನಕಗಿರಿ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿಯಾಗಲು ಕಾರ್ಯಗಾರಗಳು ಸಹಕಾರಿಯಾಗಲಿವೆ ಎಂದು ಶಿಕ್ಷಕ ಮಹದೇವಸ್ವಾಮಿ ಹೇಳಿದರು.
ಇದನ್ನೂ ಓದಿ: ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಲಿ
ತಾಲೂಕಿನ ಕಲಕೇರಿ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀಮತಿ ಪಾರ್ವತೆಮ್ಮ ಬಸನಗೌಡ ಎಜುಕೇಷನಲ್ ಮತ್ತು ರೂರಲ್ ಡೆವಲಪ್‌ಮೆಂಟ್ ಟ್ರಸ್ಟ್‌ನಿಂದ ಹಮ್ಮಿಕೊಂಡಿದ್ದ ಒಂದು ದಿನದ ಎನ್‌ಎಂಎಂಎಸ್ ಉಚಿತ ತರಬೇತಿ ಕಾರ್ಯಗಾರದಲ್ಲಿ ಮಾತನಾಡಿದರು.
ಪ್ರಸ್ತುತ ದಿನಮಾನಗಳಲ್ಲಿ ಪ್ರತಿಯೊಂದು ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಬೇಕು. ಅದರಂತೆ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್‌ಗಳನ್ನು ಪಡೆಯಲು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಬೇಕು. ಗ್ರಾಮೀಣ ವಿದ್ಯಾರ್ಥಿಗಳು ಇಂಥ ಶಿಷ್ಯವೇತನ ಪಡೆಯಲು ಪರೀಕ್ಷೆಗಳಿಗೆ ತಯಾರಿ ನಡೆಸಬೇಕಿದ್ದು, ಸಂಘ ಸಂಸ್ಥೆಗಳು ನಡೆಸುವ ಕಾರ್ಯಾಗಾರಗಳು ಸಹಕಾರಿಯಾಗಲಿವೆ ಎಂದರು. ಮುಖ್ಯ ಶಿಕ್ಷಕ ಮಂಜುನಾಥ ಮಾತನಾಡಿದರು. ಮುಖ್ಯ ತರಬೇತುದಾರರಾದ ಮಲ್ಲಿಕಾರ್ಜುನ ಗೌಡ ಪಾಟೀಲ್, ಸುರೇಶ್ ಪತ್ತಾರ್, ರಾಜಶೇಖರ್ ಇತರರಿದ್ದರು.