

ತ್ಯಾಗರ್ತಿ: ಮಕ್ಕಳ ಸಾಧನೆಗೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳು ಪೂರಕವಾಗಿರಬೇಕು ಎಂದು ಗ್ರಾಪಂ ಅಧ್ಯಕ್ಷೆ ಪ್ರಭಾವತಿ ಲೋಕೇಶ್ ಹೇಳಿದರು.
ಗುರುವಾರ ಟ್ಯಾಲೆಂಟ್ ಕಿಡ್ಸ್ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಸಮೂಹ ಸಂಪನ್ಮೂಲ ಕೇಂದ್ರ, ಗ್ರಾಪಂ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಮಾತನಾಡಿ, ಸೋಲು-ಗೆಲುವುಗಳನ್ನು ಸ್ಪರ್ಧಾ ಮನೋಭಾವದಿಂದ ಸ್ವೀಕರಿಸಬೇಕು. ಪ್ರತಿಯೊಬ್ಬರೂ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದರು.
ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅನಿಲ್ ಕುಮಾರ್, ಶಿಕ್ಷಣ ಸಂಯೋಜಕ ಉಮೇಶ್, ಗ್ರಾಪಂ ಉಪಾಧ್ಯಕ್ಷೆ ರೇಣುಕಾ ಸುರೇಶ್, ಸದಸ್ಯರಾದ ಇಸಾಕ್, ಸುಭಾಶ್‌ಚಂದ್ರ, ಶಿಕ್ಷಣ ಇಲಾಖೆಯ ಮನೋಹರ್, ನಾಗರಾಜ್, ಬಸವರಾಜಪ್ಪ, ಸರ್ಕಾರಿ ನೌಕರ ಸಂಘದ ನಿರ್ದೇಶಕ ಸೋಮಪ್ಪ, ಸಿಆರ್‌ಪಿ ಪ್ರವೀಣ್, ಮುಖ್ಯಶಿಕ್ಷಕಿ ಶ್ವೇತಾರಾಣಿ ಇತರರಿದ್ದರು.