ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸಬೇಕು

blg 25-1 karanji
ಬೀಳಗಿ ಕ್ರಾಸ್ ಸಮಿಪದ ಎಕ್ಸ್‌ಪರ್ಟ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ತಾಲೂಕುಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ 2024-25 ಕಾರ್ಯಕ್ರಮವನ್ನು ಶಾಸಕ ಜೆ.ಟಿ. ಪಾಟೀಲ ಉದ್ಘಾಟಿಸಿದರು. ಸಂಸ್ಥೆ ಅಧ್ಯಕ್ಷ ಡಿ.ಕೆ. ಚಿಕ್ಕಗಲಗಲಿ, ಬಿಇಒ ಆರ್.ಎಸ್. ಆದಾಪೂರ ಇದ್ದರು.
Published on

ಬೀಳಗಿ: ಮಕ್ಕಳಿಗೆ ವ್ಯಕ್ತಿತ್ವ ಹಾಗೂ ಸ್ಪರ್ಧಾತ್ಮಕ ಮನೋಭಾವ ರೂಪಿಸಲು ಶಿಕ್ಷಕರ ಮತ್ತು ಪೋಷಕರ ಪಾತ್ರ ಅತಿ ಮುಖ್ಯವಾಗಿದೆ ಎಂದು ಶಾಸಕ ಜೆ.ಟಿ. ಪಾಟೀಲ ಹೇಳಿದರು.

ಬೀಳಗಿ ಕ್ರಾಸ್ ಸಮೀಪದ ಎಕ್ಸ್‌ಪರ್ಟ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಜಿಪಂ, ಶಿಕ್ಷಣ ಇಲಾಖೆ ಹಾಗೂ ಎಕ್ಸ್‌ಪರ್ಟ್ ಇಂಟರ್ ನ್ಯಾಷನಲ್ ಶಾಲೆ ಸಂಯುಕ್ತಾಶ್ರಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ತಾಲೂಕುಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ 2024-25ರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರ ನೀಡಬೇಕು. ಪ್ರತಿಭಾ ಕಾರಂಜಿ ಕಾರ್ಯಕ್ರಮವು ವಿದ್ಯಾರ್ಥಿಗಳ ಕಲಿಕೆಗೆ ಹಾಗೂ ಹೊಸದಾದ ಜೀವನ ಕೌಶಲ ಹೊಂದಲು ವೇದಿಕೆಯಾಗಿದೆ. ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಗುರುತಿಸಿ ಹೊರತರಲು ಶಿಕ್ಷಕರಿಗೆ ಅವಕಾಶ ನೀಡುತ್ತದೆ. ನೈಜ ಪ್ರತಿಭೆ ಪ್ರದರ್ಶಿಸಿದ ಮಕ್ಕಳಿಗೆ ಅನ್ಯಾಯವಾಗದಂತೆ ನಿರ್ಣಯ ನೀಡಬೇಕು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಆದಾಪೂರ ಪ್ರಾಸ್ತಾವಿಕವಾಗಿ ಮಾತನಾಡಿದರು.

ಎಕ್ಸಪರ್ಟ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಿ.ಕೆ. ಚಿಕ್ಕಗಲಗಲಿ, ಕ್ಷೇತ್ರ ಸಮನ್ವಯಾಧಿಕಾರಿ ಶಿವಾಜಿ ಕಾಂಬಳೆ, ಪ್ರತಿಭಾ ಕಾರಂಜಿ ನೋಡಲ್ ಅಧಿಕಾರಿ ಎಚ್.ಟಿ. ಹೊಸಗೌಡ್ರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಎಸ್.ವಿ. ಪಾಟೀಲ, ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಜಿಲ್ಲಾಧ್ಯಕ್ಷ ಎಚ್.ಜಿ. ತಿಪರಡ್ಡಿ, ಪ್ರೌಢಶಾಲೆ ತಾಲೂಕು ಘಟಕ ಪರಶುರಾಮ ಮಾದರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net