

ಗದಗ: ಜನೆವರಿ 12 ರಂದು ಜರುಗುವ ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕಾಲೇಜು ಶಿಕ್ಷಣ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಪದವಿ, ಸ್ನಾತಕೋತ್ತರ ಮತ್ತು ವೃತ್ತಿಪರ ಕಾಲೇಜುಗಳ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ರಾಷ್ಟ್ರ ನಿರ್ಮಾಣದಲ್ಲಿ ಯುವಜನತೆಯ ಪಾತ್ರ ಎಂಬ ವಿಷಯವಾಗಿ ಭಾಷಣ ಸ್ಪರ್ಧೆಯನ್ನು ಜನೆವರಿ 8 ರಂದು ಬೆ 10 ಗಂಟೆಗೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ ಮತ್ತು ಕೆ.ಐ.ಎ.ಡಿ.ಬಿ. ವಸಾಹತು ಪ್ರದೇಶ, ನಾಗಸಮುದ್ರ ರಸ್ತೆ, ನರಸಾಪುರ, ಬೆಟಗೇರಿ-ಗದಗ ಇಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಸ್ಪರ್ಧೆಯಲ್ಲಿ ಗದಗ ಜಿಲ್ಲೆಯ ಎಲ್ಲ ಸರಕಾರಿ/ ಅನುದಾನಿತ/ ಅನುದಾನರಹಿತ ಮತ್ತು ಬಿ.ಇ.ಡಿಕಾಲೇಜುಗಳ ವತಿಯಿಂದ ಕನಿಷ್ಟ ಇಬ್ಬರು ವಿದ್ಯಾರ್ಥಿಗಳು ತಮ್ಮ ಕಾಲೇಜು ಪ್ರಾಂಶುಪಾಲರಿಂದ ಪಡೆದ ಅನುಮತಿ ಪತ್ರದೊಂದಿಗೆ ಹಾಜರಾಗಲು ತಿಳಿಸಲಾಗಿದೆ. ಭಾಷಣ ಸ್ಪರ್ಧೆಯ ಸಮಯ ಒಬ್ಬರಿಗೆ 4 + 1 ನಿಮಿಷಗಳನ್ನು ನಿಗದಿಪಡಿಸಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಪ್ರೊ. ಕೇಶವ ಪ್ರಹ್ಲಾದಾಚಾರ್ , ಆಂಗ್ಲ ಭಾಷಾ ಪ್ರಾಧ್ಯಾಪಕರು, ಮೊ.ಸಂ. 9980439692 ಮತ್ತು ಡಾ. ಪಿ.ಎಚ್. ಕ್ಯಾರಕೊಪ್ಪ , ರಾಜ್ಯ ಶಾಸ್ತ್ರ ಪ್ರಾಧ್ಯಾಪಕರು ಇವರ ಮೊಬೈಲ್ ಸಂಖ್ಯೆ 9481528086 ಸಂಪರ್ಕಿಸಬಹುದಾಗಿದೆ.