ರಕ್ತದಾನದಿಂದ ಆತ್ಮತೃಪ್ತಿ

Complacency with blood donation
ಕೂಡಲಸಂಗಮ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಹಾಗೂ ಬಾಗಲಕೋಟೆ ಕೆರೂಡಿ ಬ್ಲಡ್ ಸೆಂಟರ್‌ದಲ್ಲಿ ನಡೆದ ಶಿಬಿರದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳು ರಕ್ತದಾನ ಮಾಡಿದರು. ಡಾ. ಉಮೇಶ ಪಟ್ಟೆದ, ತರಬೇತಿ ಕೇಂದ್ರದ ಘಟಕ ವ್ಯವಸ್ಥಾಪಕ ಯಲ್ಲಪ್ಪ ಸವದತ್ತಿ, ಶಿವಕುಮಾರ ಕಚ್ಯಾಣಿ ಇತರರಿದ್ದರು.
Published on

ಕೂಡಲಸಂಗಮ: ರಕ್ತದಾನದಿಂದ ರಕ್ತದೊತ್ತಡ, ಮಧುವೇಹದಂತಹ ರೋಗಗಳು ನಿಯಂತ್ರಣಕ್ಕೆ ಬರುವ ಜತೆಗೆ ಆತ್ಮತೃಪ್ತಿ ಸಿಗುತ್ತದೆ ಎಂದು ಕೂಡಲಸಂಗಮ ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಡಾ. ಉಮೇಶ ಪಟ್ಟೆದ ಹೇಳಿದರು.

ಕೂಡಲಸಂಗಮ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಹಾಗೂ ಬಾಗಲಕೋಟೆ ಕೆರೂಡಿ ಬ್ಲಡ್ ಸೆಂಟರ್‌ದಿಂದ ಇತ್ತೀಚೆಗೆ ಹಮ್ಮಿಕೊಂಡ ಸ್ವಯಂಪ್ರೇರಿತ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರಕ್ತದಾನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ದೇಶದಲ್ಲಿ ಪ್ರತಿವರ್ಷ 41 ದಶಲಕ್ಷ ಯೂನಿಟ್ ರಕ್ತದ ಕೊರತೆ ಎದುರಾಗುತ್ತಿದೆ. ಸಮರ್ಪಕವಾಗಿ ರಕ್ತ ಸಿಗದೆ ರೋಗಿಗಳು, ಅಪಘಾತದ ಗಾಯಾಳುಗಳು ಮೃತಪಡುತ್ತಿದ್ದಾರೆ. ಅಮೂಲ್ಯವಾದ ಜೀವಗಳನ್ನು ಉಳಿಸಲು ರಕ್ತದಾನ ಮಾಡುವುದು ಅತಿ ಅವಶ್ಯವಾಗಿದ್ದು, ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಬೇಕೆಂದು ಹೇಳಿದರು.

ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಘಟಕ ವ್ಯವಸ್ಥಾಪಕ ಯಲ್ಲಪ್ಪ ಸವದತ್ತಿ ಅಧ್ಯಕ್ಷತೆ ವಹಿಸಿ ಮಾತನಾಡಿ, ರಕ್ತದಾನದಿಂದ ಮೂವರ ಪ್ರಾಣ ಉಳಿಸಬಹುದು. ರಕ್ತ ಉತ್ಪಾದಿಸಲು ಸಾಧ್ಯವಿಲ್ಲ. ಮನುಷ್ಯ ದಾನ ಮಾಡಿದರಷ್ಟೇ ರಕ್ತದ ಉತ್ಪಾದನೆ ಸಾಧ್ಯ ಎಂದರು.

ಶಿಬಿರದಲ್ಲಿ ಉಪನ್ಯಾಸಕರಾದ ಶಿವಕುಮಾರ ಕಂಚ್ಯಾಣಿ, ಶಿವಲೀಲಾ ಚೌಧರಿ, ನಿರಂಜನ ನಂಜಯ್ಯನಮಠ, ವಿರಾಂಜನೇಯ, ವಿಶ್ವನಾಥ ಹೊಕ್ರಾಣಿ, ವೀರಣ್ಣ ಸಿ.ಎಂ. ಇತರರಿದ್ದರು.

ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ರಕ್ತ ಪರೀಕ್ಷಿಸಿ ರಕ್ತದ ಗುಂಪು, ಪ್ರಮಾಣ ಪತ್ರ ನೀಡಲಾಯಿತು. ಅಂತಿಮ ವರ್ಷದ ವಿದ್ಯಾರ್ಥಿಗಳು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು. ರಕ್ತದಾನ ನೀಡಿದ ವಿದ್ಯಾರ್ಥಿಗಳಿಗೆ ಶಿಬಿರದ ಮುಖ್ಯಸ್ಥ ಕಲ್ಲಪ್ಪ ಪ್ರಮಾಣ ಪತ್ರ ವಿತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net