

ಕಲಬುರಗಿ: ನೀತಿ ಸಂಹಿತೆ ಉಲ್ಲಂಘಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷನ ವಿರುದ್ದ ಎಫ್ ಐ ಆರ್ ದಾಖಲಿಸಲಾಗಿದೆ. ಕಲಬುರಗಿ ಗ್ರಾಮಾಂತರ ಜಿಲ್ಲಾಧ್ಯಕ್ಷನ ವಿರುದ್ದ ಎಫ್ ಐ ಆರ್ ದಾಖಲಾಗಿದೆ.
ನೀತಿ ಸಂಹಿತೆ ಜಾರಿಯಲ್ಲಿದ್ದಾಗಲೆ ಕ್ರಿಕೇಟ್ ಟೂರ್ನಮೆಂಟ್ ಆಯೋಜಿಸಿದ್ದ ರದ್ದೆವಾಡಗಿ ಸೇರಿದಂತೆ ಐವರ ವಿರುದ್ಧ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಬಿಜೆಪಿ ಪಕ್ಷದ ಚಿಹ್ನೆ ಮತ್ತು ಜಿಲ್ಲಾಧ್ಯಕ್ಷನ ಹೆಸರಲ್ಲಿ ಆಯೋಜಿಸಿದ್ದ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಲಾಗಿತ್ತು.
ಶಿವರಾಜ್ ಪಾಟೀಲ್ ರದ್ದೆವಾಡಗಿ ಜೇವರ್ಗಿ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿದ್ದಾರೆ.