ಮೈಸೂರು: ಯಾವುದೇ ಆಧಾರವಿಲ್ಲದೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ‘ಸಿಡಿ ಶಿವು’ ಎಂದು ತೇಜೋವಧೆ ಮಾಡುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ದೂರು ನೀಡಲಾಗುವುದು ಎಂದು ನಗರ ಕಾಂಗ್ರೆಸ್ ವಕ್ತಾರ ಎಸ್.ರಾಜೇಶ್ ಹೇಳಿದರು.
ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅನ್ಯಾಯಕ್ಕೊಳಗಾದ ಸಂತ್ರಸ್ತೆಯರ ಪರ ಮಾತನಾಡದ ಕುಮಾರಸ್ವಾಮಿ ಅವರು ಕೆಳಮಟ್ಟದ ರಾಜಕಾರಣದಲ್ಲಿ ತೊಡಗಿದ್ದಾರೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
ವಿದೇಶ ಪ್ರವಾಸದ ವೇಳೆ ಅನಾರೋಗ್ಯ ಉಂಟಾಗಿ ಮೃತರಾದ ರಾಕೇಶ್ ಸಿದ್ದರಾಮಯ್ಯ ಅವರ ಬಗ್ಗೆ ಇಲ್ಲ ಸಲ್ಲದ ಮಾತನಾಡುವುದನ್ನು ನಿಲ್ಲಿಸಬೇಕು. ಸಾಧ್ಯವಾದರೆ ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ಮತ್ತು ಪ್ರಜ್ವಲ್ ಬಂಧನಕ್ಕಾಗಿ ಕೇಂದ್ರಕ್ಕೆ ಒತ್ತಡ ಹೇರಲಿ ಎಂದರು. ನಗರ ಕಾಂಗ್ರೆಸ್ ಮುಖಂಡ ಟಿ.ಶ್ರೀನಿವಾಸ್ ಇದ್ದರು.