ಗೃಹಸಚಿವ ಅಮಿತ್ ಷಾ ವಿರುದ್ಧ ದೂರು: ಕಾನೂನು ಕ್ರಮಕ್ಕೆ ಒತ್ತಾಯಿಸಿದ ಶಾಸಕ ನರೇಂದ್ರಸ್ವಾಮಿ

Complaint against Home Minister Amit Shah Mandya
Published on

ಮಂಡ್ಯ: ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಪಾರ್ಲಿಮೆಂಟ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಲಘುವಾಗಿ ಮಾತನಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರಿಗೆ ದೂರು ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು, ಪಾರ್ಲಿಮೆಂಟ್‌ನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೀಳು ಮಟ್ಟದ ಭಾಷೆ ಬಳಸುವ ಜತೆಗೆ ಕೆಟ್ಟ ರಾಜಕೀಯ ನೀತಿ ಅನುಸರಿ ಸುತ್ತಿರುವ ಅಮಿತ್ ಷಾ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬೇಸರತ್ ಕ್ಷಮೆಯಾಚಿಸಬೇಕು. ಅಂಬೇಡ್ಕರ್ ಅವರ ಬಗ್ಗೆ ಸಂಸತ್ ಕಲಾಪದ ಸಮಯದಲ್ಲಿ ಅವಹೇಳನಕಾರಿ ಪದಗಳನ್ನು ಬಳಸಿ ದೇಶದ ಜನರ ಭಾವನೆಗಳನ್ನು ಕೆರಳಿಸಿ, ಶಾಂತಿ ಕದಡುವ ಪ್ರಯತ್ನದ ಕೃತ್ಯ ಎಸಗಿರುವ ಅಮಿತ್ ಷಾ ವಿರುದ್ದ ಕ್ರಮ ಕೈಗೊಳ್ಳಬೇಕು. ದೌರ್ಜನ್ಯ ಪ್ರಕರಣ ದಾಖಲಿಸಿ ಮತ್ತು ಅವರು ಬಳಸಿರುವ ಭಾಷೆಗೆ ಕಾನೂನು ರೀತಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಜಿಪಂ ಮಾಜಿ ಅಧ್ಯಕ್ಷ ಸುರೇಶ್ ಕಂಠಿ, ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ಉಪಾಧ್ಯಕ್ಷ ತಿಬ್ಬನಹಳ್ಳಿ ರಮೇಶ್, ಸುಂಡಹಳ್ಳಿ ಸಿದ್ದರಾಜು, ಪ್ರಾಣೇಶ್, ಕುಮಾರಸ್ವಾಮಿ, ದೀಪಕ್, ದೇವರಾಜು, ಶಿವಾನಂದಮೂರ್ತಿ, ಲವ, ಕೊತ್ತತ್ತಿ ಮಹದೇವು, ನಿತ್ಯಾನಂದ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net