ಕೆಪಿಸಿಸಿ ವಕ್ತಾರ ಲಕ್ಷ್ಮಣ್ ವಿರುದ್ಧ ದೂರು: ಕಾನೂನು ಕ್ರಮಕ್ಕೆ ಒತ್ತಾಯಿಸಿದ ಹನುಮಧ್ವಜ ಸಮಿತಿ

Complaint against Laxman Mandya
Published on

ಮಂಡ್ಯ: ಮೈಸೂರಿನಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಸಂಘಟನೆ ವಿರುದ್ಧ ದಾಖಲೆರಹಿತ ಹೇಳಿಕೆ ನೀಡಿರುವ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ತಾಲೂಕಿನ ಕೆರಗೋಡು ಹನುಮಧ್ವಜ ಸಮಿತಿ ಸದಸ್ಯರು ಬುಧವಾರ ದೂರು ದಾಖಲು ಮಾಡಿದ್ದಾರೆ.

ಆರ್‌ಎಸ್‌ಎಸ್ ಸಂಘಟನೆಯವರು ವೇಷ ಮರೆಸಿಕೊಂಡು ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆಂದು ಲಕ್ಷ್ಮಣ್ ಆರೋಪಿಸಿದ್ದಾರೆ. ಇದು ನಿರಾಧಾರವಾಗಿದೆ. ದೇಶದ ಏಳಿಗೆಗಾಗಿ ನೂರಾರು ವರ್ಷದಿಂದ ಶ್ರಮಿಸುತ್ತಿರುವ ಆರ್‌ಎಸ್‌ಎಸ್ ಸಂಘಟನೆ ಬಗ್ಗೆ ಆರೋಪ ಮಾಡಿರುವ ಲಕ್ಷ್ಮಣ್ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಕೆರಗೋಡು ಪೊಲೀಸ್ ಠಾಣೆಗೆ ಸಲ್ಲಿಸಿರುವ ದೂರಿನಲ್ಲಿ ಒತ್ತಾಯಿಸಿದ್ದಾರೆ.

Complaint against Laxman
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net