ವೈದ್ಯಾಧಿಕಾರಿ ವಿರುದ್ಧ ದೂರು

27M.D.R.1
Published on

ಮದ್ದೂರು: ಪಟ್ಟಣದ ಕೆ.ಗುರುಶಾಂತಪ್ಪ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಬಾಲಕೃಷ್ಣ ಅವರು ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸುವ ಜತೆಗೆ ಕರ್ತವ್ಯಕ್ಕೆ ಸರಿಯಾಗಿ ಹಾಜರಾಗದ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕೆ.ಮೋಹನ್ ಅವರಿಗೆ ಬುಧವಾರ ತೆಂಗು ಬೆಳೆಗಾರರ ಸಂಘದ ಅಧ್ಯಕ್ಷ ಚನ್ನಸಂದ್ರ ಲಕ್ಷ್ಮಣ್ ದೂರು ನೀಡಿದರು.

ವೈದ್ಯಾಧಿಕಾರಿ ಬಾಲಕೃಷ್ಣ ನಿಗದಿತ ಅವಧಿಗೆ ಕರ್ತವ್ಯಕ್ಕೆ ಹಾಜರಾಗದೆ ನಿರ್ಲಕ್ಷ್ಯ ಧೋರಣೆ ಅನುಸರಿಸುವ ಜತೆಗೆ ಸಂಘ, ಸಂಸ್ಥೆಗಳ ಮುಖಂಡರು ಪ್ರಶ್ನಿಸಿದಾಗ ಉಡಾಫೆಯಿಂದ ವರ್ತಿಸುತ್ತಿದ್ದು, ಇವರ ಮೇಲೆ ಕ್ರಮ ಜರುಗಿಸುವಂತೆ ಮನವಿ ಮಾಡಿದರು. ಆಸ್ಪತ್ರೆಗೆ ಬರುವ ರೋಗಿಗಳು ಸಕಾಲದಲ್ಲಿ ವೈದ್ಯರು ಸಿಗದೆ ಗಂಟೆಗಟ್ಟಲೇ ಕಾಯಬೇಕಾಗಿದೆ. ಸಂಜೆ ವೇಳೆ ಕರ್ತವ್ಯಕ್ಕೆ ಮುಂಚೆಯೇ ಮನೆಗೆ ತೆರಳುತ್ತಿದ್ದಾರೆ. ಅಲ್ಲದೇ, ಹಲವು ಅವ್ಯವಹಾರಗಳಲ್ಲಿ ಭಾಗಿಯಾಗಿದ್ದು ಕೂಡಲೇ ಇವರನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಡಿಎಚ್‌ಒ ಕೆ.ಮೋಹನ್, ಕರ್ತವ್ಯಕ್ಕೆ ಸಮರ್ಪಕವಾಗಿ ಹಾಜರಾಗದ ವೈದ್ಯರಿಗೆ ಮತ್ತು ಬಾಲಕೃಷ್ಣ ವಿರುದ್ಧ ಕೇಳಿಬಂದಿರುವ ಆರೋಪದ ಬಗ್ಗೆ ಮಾಹಿತಿ ಕಲೆಹಾಕಿ ಕ್ರಮ ಜರುಗಿಸುವ ಭರವಸೆ ನೀಡಿದರಲ್ಲದೆ ಈ ಸಂಬಂಧ ಜಿಲ್ಲಾಧಿಕಾರಿ ಜತೆಗೆ ಚರ್ಚಿಸುವುದಾಗಿ ಹೇಳಿದರು.
ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಎಂ.ಎನ್. ಆಶಾಲತಾ, ತಾಲೂಕು ಆರೋಗ್ಯಾಧಿಕಾರಿ ಡಾ. ರವೀಂದ್ರ.ಬಿ.ಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net