ಮೈಸೂರು: ಸುಪ್ರಿಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಕಿಶೋರ್ ವಿರುದ್ಧ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.6ರಂದು ಕೋರ್ಟ್ ಆವರಣದಲ್ಲಿ ವಕೀಲ ರಾಕೇಶ್ ಕಿಶೋರ್ ಅವರು ನ್ಯಾಯಮೂರ್ತಿ ಗವಾಯಿ ಅವರತ್ತ ಶೂ ಎಸೆದಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕಾನೂನಿನಡಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಕೀಲ ಎನ್.ಪುನೀತ್ ದೂರಿನಲ್ಲಿ ತಿಳಿಸಿದ್ದಾರೆ.