ಆಯುಧ ಹಿಡಿದು ವಿಡಿಯೋ ಮಾಡಿದ್ದ ಯುವಕನ ವಿರುದ್ಧ ದೂರು

kote police station
ಶಿವಮೊಗ್ಗ ಕೋಟೆ ಠಾಣೆ
Published on

ಶಿವಮೊಗ್ಗ: ಉದ್ದನೆಯ ಹರಿತ ಆಯುಧ ಹಿಡಿದು ವಿಡಿಯೋ ಮಾಡಿ ಇನ್‌ಸ್ಟಾಗ್ರಾಂನಲ್ಲಿ ಅಪ್‌ಲೋಡ್ ಮಾಡಿದ್ದ ಯುವಕನ ವಿರುದ್ಧ ಶಿವಮೊಗ್ಗದಲ್ಲಿ ಪೊಲೀಸರು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ. ಜಬೀರ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.

ಆಯುಧ ಪ್ರದರ್ಶಿಸುವ ವಿಡಿಯೋವನ್ನು ಎಡಿಟ್ ಮಾಡಿ ಇನ್‌ಸ್ಟಾಗ್ರಾಂನಲ್ಲಿ ಅಪ್‌ಲೋಡ್ ಮಾಡಲಾಗಿತ್ತು. ಯು ಆರ್ ಮೈ ಎನಿಮಿ ಎಂದು ವಿಡಿಯೋದಲ್ಲಿ ಬರೆಯಲಾಗಿತ್ತು ಎಂದು ಆರೋಪಿಸಲಾಗಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಾಧ್ಯತೆ ಇರುವುದರಿಂದ ವಿಡಿಯೋ ಅಪ್‌ಲೋಡ್ ಮಾಡಿದ್ದ ಜಬೀರ್ ವಿರುದ್ಧ ಕೋಟೆ ಠಾಣೆಯಲ್ಲಿ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net