ಗೃಹ ಸಚಿವರ ವಿರುದ್ಧ ದೂರು

complaint
Published on

ತುಮಕೂರು: ಜಾತಿ ಧರ್ಮಗಳ ನಡುವೆ ಕೋಮು ಗಲಭೆ ಸೃಷ್ಟಿಸುವ ಪ್ರಚೋದನಕಾರಿ ಹೇಳಿಕೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ದೂರು ನೀಡಲಾಗಿದೆ. ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಶಿ ಹುಲಿಕುಂಟೆ ಮಠ್, ರಾಜ್ಯ ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಅನಿಲ್ ಕುಮಾರ್, ಇಲಾಹಿ ಸಿಕಂದರ್, ಜಿಲ್ಲಾ ಉಪಾಧ್ಯಕ್ಷ ಮೋಹನ್‌ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜರ್ ನೇತೃತ್ವದಲ್ಲಿ ಗುರುವಾರ ಜಿಲ್ಲಾ ಹೆಚ್ಚುವರಿ ಪೋಲಿಸ್ ಅಧೀಕ್ಷಕ ಟಿ.ಜೆ.ಉದೇಶ್‌ಗೆ ದೂರು ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net