

ಮಂಡ್ಯ: ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನಿರ್ಲಕ್ಷ್ಯತನ ತೋರುತ್ತಿದ್ದಾರೆಂದು ಆರೋಪಿಸಿ ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್‌ಗೆೆ ಹುಲಿವಾನ ಗ್ರಾ.ಪಂ ಮಾಜಿ ಅಧ್ಯಕ್ಷ ಚಾಮರಾಜು ದೂರು ನೀಡಿದ್ದಾರೆ.
ಜಿಪಂ ಕಚೇರಿಗೆ ತೆರಳಿದ ಚಾಮರಾಜು, ಹುಲಿವಾನ ಗ್ರಾಪಂನಲ್ಲಿ 2020-21 ಹಾಗೂ 2021-22ನೇ ಸಾಲಿನ ಜಮಾಬಂದಿ ಕಾರ್ಯಕ್ರಮವನ್ನು ನಿಗದಿತ ಅವಧಿಯಲ್ಲಿ ನಡೆಸದೆ ನಿರ್ಲಕ್ಷ್ಯ ವಹಿಸಲಾಗಿದೆ. ಈ ಬಗ್ಗೆ ತಾ.ಪಂ ಇಒ ಅವರನ್ನು ಭೇಟಿ ಮಾಡಿ ಎರಡು ಬಾರಿ ಮನವಿ ಸಲ್ಲಿಸಿದ್ದರೂ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ. ನೀಡಿರುವ ದೂರಿನ ಬಗ್ಗೆ ಕ್ರಮ ಕೈಗೊಂಡು ದೂರುದಾರರಿಗೆ ಸಮರ್ಪಕ ಮಾಹಿತಿ ನೀಡದೆ ನಿರ್ಲಕ್ಷ್ಯ ವಹಿಸಿದ್ದಾರೆ. ಆದ್ದರಿಂದ ಇಒ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.