ಸಂಸದ ಪ್ರತಾಪ್ ಸಿಂಹ ವಿರುದ್ಧ ಜಿಲ್ಲಾಧಿಕಾರಿಗೆ ದೂರು

Prathap Simha
Published on

ಮೈಸೂರು: ಸಂಸದ ಪ್ರತಾಪ್ ಸಿಂಹ ಸಂಸದರ ಪ್ರದೇಶಾಭಿವೃದ್ಧಿ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ನೇತೃತ್ವದ ಕಾಂಗ್ರೆಸ್ ನಿಯೋಗ ಸೋಮವಾರ ದೂರು ನೀಡಿದೆ.

ಜಿಲ್ಲಾಧಿಕಾರಿ ರಾಜೇಂದ್ರ ಸೋಮವಾರ ಕಚೇರಿಯಲ್ಲಿ ಇಲ್ಲದ ಕಾರಣ ಅಪರ ಜಿಲ್ಲಾಧಿಕಾರಿ ಮಂಜುನಾಥಸ್ವಾಮಿಗೆ ದೂರು ಸಲ್ಲಿಸಿದರು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯರಾದ ಪ್ರತಾಪ್ ಸಿಂಹ, ಸರ್ಕಾರಿ ನಿಯಮಗಳನ್ನು ಗಾಳಿಗೆ ತೂರಿ ಪ್ರದೇಶಾಭಿವೃದ್ಧಿ ಅನುದಾನವನ್ನು ಹಂಚಿಕೆ ಮಾಡಿದ್ದಾರೆ. ಸಂಸದರ ಪ್ರದೇಶಾಭಿವೃದ್ಧಿ ಅನುದಾನವನ್ನು ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಮತ್ತು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯ ಚಾರಿಟೆಬಲ್ ಟ್ರಸ್ಟ್‌ಗಳಿಗೆ ನೀಡಿದ್ದಾರೆ.

ಈ ಮೂಲಕ ಸಂಸದ ಪ್ರತಾಪ್ ಸಿಂಹ ಶಿಷ್ಟಾಚಾರದ ಉಲ್ಲಂಘನೆ ಮಾಡಿದ್ದಾರೆ. ಇದು ಕ್ರಿಮಿನಲ್ ಅಪರಾಧವಾಗಿದೆ. ಹಾಗಾಗಿ ಪ್ರತಾಪ್ ಸಿಂಹ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರು ನೀಡಿದ್ದಾರೆ.
ಎರಡು ಚಾರಿಟಬಲ್ ಟ್ರಸ್ಟ್‌ಗಳಿಗೆ ನೀಡಿರುವ ಅನುದಾನವನ್ನು ವಾಪಸ್ ಪಡೆದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಬಳಕೆ ಮಾಡಿಕೊಳ್ಳಬೇಕೆಂದು ಎಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net