ಗಣರಾಜ್ಯೋತ್ಸವಕ್ಕೆ ಗೈರಾದರೆ ಡಿಸಿಗೆ ದೂರು

19SPT8
ಸೋಮವಾರಪೇಟೆ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ತಹಸೀಲ್ದಾರ್ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು. ಕೃಷ್ಣಮೂರ್ತಿ, ಎಚ್.ಸಿ.ನಾಗೇಶ್, ಸುರೇಶ್ ಶೆಟ್ಟಿ, ಕವನ್, ಜಾನಕಿ, ವಿಜೇತ್ ಇದ್ದರು.
Published on

ಸೋಮವಾರಪೇಟೆ: ಗಣರಾಜ್ಯೋತ್ಸವ ಆಚರಣೆಯಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು ಖಡ್ಡಾಯವಾಗಿ ಪಾಲ್ಗೊಳ್ಳದಿದ್ದರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗುವುದು ಎಂದು ಎಂದು ತಹಸೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ಎಚ್ಚರಿಸಿದರು.

ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಶನಿವಾರ ತಹಸೀಲ್ದಾರ್ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಷ್ಟ್ರೀಯ ಹಬ್ಬಗಳ ಆಚರಣೆ ಕುರಿತು ನಡೆಸುವ ಸಭೆಗೆ ಪ್ರತಿ ಬಾರಿಯೂ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸುತ್ತಿಲ್ಲ. ಹೀಗಾಗಿ ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು.

ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಬೇಕು. ಎಲ್ಲ ಇಲಾಖೆಗಳ ಅಧಿಕಾರಿಗಳು ತಮ್ಮ ಕಚೇರಿಯಲ್ಲೂ ಜ.26ರ ಬೆಳಗ್ಗೆ 8 ಗಂಟೆಗೆ ಧ್ವಜಾರೋಹಣ ನೆರವೇರಿಸಿ ನಂತರ ಪಟ್ಟಣದ ಪದವಿಪೂರ್ವ ಕಾಲೇಜಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.

ಮಾಜಿ ಸೈನಿಕರನ್ನು ಪಥಸಂಚಲನದಲ್ಲಿ ಪಾಲ್ಗೊಳ್ಳಲು ಆಹ್ವಾನಿಸಬೇಕು. ಉಳಿದಂತೆ ಪೊಲೀಸ್, ಸ್ಕೌಟ್ಸ್ ಮತ್ತು ಗೈಡ್ಸ್, ಎನ್‌ಸಿಸಿ ತಂಡಗಳು ಪಥಸಂಚಲನಕ್ಕೆ ಅಗತ್ಯ ತಯಾರಿ ಮಾಡಿಕೊಳ್ಳಬೇಕೆಂದು ನಿರ್ದೇನ ನೀಡಿದರು.

ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಪ್ರದರ್ಶನಕ್ಕೆ ಅವಕಾಶ ನೀಡಬೇಕು. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ ಅಥವಾ ಇಲಾಖೆಗಳಲ್ಲಿ ಉತ್ತಮ ಸೇವೆ ಮಾಡಿದ ನಾಲ್ವರನ್ನು ಸನ್ಮಾನಿಸುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಭೆಯಲ್ಲಿ ರಾಷ್ಟ್ರೀಯ ಹಬ್ಬಗಳ ಸಮಿತಿ ಸದಸ್ಯರು ಹಾಗೂ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net