ರೆಡ್ಡಿ ವಿರುದ್ಧ ಎಸ್ಪಿಗೆ ದೂರು

Published on

ಬಳ್ಳಾರಿ : ಮಾಜಿ ಸಚಿವ ಶ್ರೀರಾಮುಲು ಅವರನ್ನು ಕೊಲೆಗಾಡುಕಾ ಎಂಬ ಹೇಳಿಕೆ ನೀಡಿರುವ ಶಾಸಕ ಜಿ.ಜನಾರ್ದನರೆಡ್ಡಿ ವಿರುದ್ದ ಎಸ್ಪಿಗೆ ದೂರು ನೀಡಲಾಗುವುದು ಎಂದು ಉದ್ಯಮಿ ಜೋಳದರಾಶಿ ತಿಮ್ಮಪ್ಪ ಹೇಳಿದರು.

ಇಲ್ಲಿನ ಖಾಸಗಿ ಹೋಟೆಲ್‌ನಲ್ಲಿ ವಾಲ್ಮೀಕಿ ಸಮುದಾಯದಿಂದ ಶನಿವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಜನಾರ್ದನರೆಡ್ಡಿ ಅವರು ರಾಮುಲು ವಿರುದ್ಧ ನೀನು ಕೀಳು ಜಾತಿಯವನು ಕೊಡಲಿ ಹಿಡಿದುಕೊಂಡು ಬೀದಿಯಲ್ಲಿ ಓಡಾಡತ್ತಿದ್ದವನು. ನಿನ್ನ ರಾಜಕೀಯ ಜೀವನ ರೂಪಿಸಿದ್ದು ನಾನು ಎಂದೆಲ್ಲ ಹೇಳಿಕೆ ನೀಡಿದ್ದಾರೆ. ಅವರ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲಿಸಲಾಗುವುದು. ರೆಡ್ಡಿ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಜಾತಿ ನಿಂದನೆ ಪ್ರಕರಣ ದಾಖಲು ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿ, ರಾಜ್ಯದ ಎಲ್ಲ ಎಸ್ಪಿಗಳಿಗೆ ದೂರು ಕೊಡಲಾಗುವುದು. ಅದು ಸಫಲವಾಗದಿದ್ದರೆ ರಾಜ್ಯಾದ್ಯಾಂತ ಹೋರಾಟ ರೂಪಿಸಿ, ಅಭಿಯಾನ ಕೈಗೊಳ್ಳುತ್ತೇವೆ ಎಂದರು. ರೆಡ್ಡಿ ಸಮುದಾಯ, ರಾಮುಲು ಅವರ ಕ್ಷಮೆ ಕೇಳಬೇಕು. ರಾಮುಲು ಅವರಿಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೇ ಬೆಂಬಲ ಸೂಚಿಸಿದ್ದಾರೆ. ರಾಮುಲು ಮನಸ್ಥಿತಿ ಏನು, ರೆಡ್ಡಿ ಮನಸ್ಥಿತಿ ಏನು ಎಂಬುದು ಪಕ್ಷಕ್ಕೆ ತಿಳಿದಿದೆ. ಸದಾ ರಾಮುಲು ಪರವಾಗಿ ಸಮುದಾಯವಿದೆ ಎಂದರು. ಸಮುದಾಯದ ಮುಖಂಡರಾದ ಶಿವಾನಂದ, ಕೆ.ಹನುಮಂತಪ್ಪ, ಸತ್ಯನಾರಾಯಣ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net