ಮಾಜಿ ಡಿಸಿಎಂ ಈಶ್ವರಪ್ಪ ವಿರುದ್ಧ ಎಸ್ಪಿಗೆ ದೂರು

manavi
ಡಿ.ಕೆ.ಶಿವಕುಮಾರ್ ಅಭಿಮಾನಿಗಳು ಎಸ್ಪಿ ಜಿ.ಕೆ.ಮಿಥುನ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು. ರಮೇಶ್ ಶಂಕರಘಟ್ಟ, ಪಿ.ಒ.ಶಿವಕುಮಾರ್, ಕುರುವಳ್ಳಿ ನಾಗರಾಜ್, ವೈ.ಎಚ್.ನಾಗರಾಜ್, ಗಾಜನೂರು ಸುದೀಪ್ ಇತರರಿದ್ದರು.
Published on

ಶಿವಮೊಗ್ಗ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ನೀರಿನ ಕಳ್ಳ ಎಂದಿರುವ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್ ನೇತೃತ್ವದಲ್ಲಿ ಶುಕ್ರವಾರ ಎಸ್ಪಿ ಜಿ.ಕೆ.ಮಿಥುನ್‌ಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು.

ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆಗೆ ಸಂಬಂಸಿದಂತೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಹಾಗೂ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶಗಳನ್ನು ಪಾಲಿಸುತ್ತಿದೆ. ಕೆ.ಎಸ್.ಈಶ್ವರಪ್ಪ ಜಲಸಂಪನ್ಮೂಲ ಸಚಿವರಾಗಿ ಕೆಲಸ ಮಾಡಿದವರು. ಆದರೂ ಈ ಸನ್ನಿವೇಶದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ನೀರಿನ ಕಳ್ಳ ಎಂದಿರುವುದು ಖಂಡನೀಯ ಎಂದು ಮನವಿಯಲ್ಲಿ ಆಕ್ರೋಶ ವ್ಯಕ್ತಪಡಿಸಲಾಗಿದೆ.
ರಾಜ್ಯದಲ್ಲಿ ಬರಗಾಲವಿರುವುದು ನಿಜ. ಜಲಾಶಯದಲ್ಲಿ ನಿರೀಕ್ಷಿತ ಮಟ್ಟದಲ್ಲಿ ನೀರು ಸಂಗ್ರಹವಿಲ್ಲ ಎಂಬುದೂ ನಿಜ. ಇದರಲ್ಲಿ ಡಿ.ಕೆ. ಶಿವಕುಮಾರ್ ಅವರ ಪಾತ್ರವೇನಿದೆ? ನ್ಯಾಯಾಲಯದ ಆದೇಶ ಗೌರವಿಸಬೇಕು. ಅದಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ಸಲಹೆ ಕೊಡಬಹುದಿತ್ತು. ಆದರೆ, ನೀರಿನ ಕಳ್ಳ ಎಂದು ಹೀಯಾಳಿಸಿರುವುದು ಸರಿಯಲ್ಲ ಎಂದರು.
ಡಿ.ಕೆ.ಶಿವಕುಮಾರ್ ವಿರುದ್ಧ ಈಶ್ವರಪ್ಪನವರು ಕ್ಷುಲ್ಲಕ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು. ಇಲ್ಲದೇ ಹೋದರೆ ಕಾಂಗ್ರೆಸ್ ಕಾರ್ಯಕರ್ತರಿಂದ ತೀವ್ರ ಪ್ರತಿರೋಧ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಿ.ಒ.ಶಿವಕುಮಾರ್, ಜಿಲ್ಲಾ ಕಾಂಗ್ರೆಸ್ ವಕ್ತಾರ ರಮೇಶ್ ಶಂಕರಘಟ್ಟ, ಕೆಪಿಸಿಸಿ ಸದಸ್ಯ ವೈ.ಎಚ್. ನಾಗರಾಜ್, ಪ್ರಮುಖರಾದ ಜಿ.ಡಿ.ಮಂಜುನಾಥ್, ಕುರುವಳ್ಳಿ ನಾಗರಾಜ್, ರಂಗಸ್ವಾಮಿ ಗೌಡ, ಟಾಕ್ರಾನಾಯ್ಕಾ, ಸಿದ್ದಪ್ಪ, ಗಣೇಶ್, ಶ್ರೀಕಾಂತ್, ಗಾಜನೂರು ಸುದೀಪ್, ಗಾಜನೂರು ನಾಗರಾಜ್, ಲೋಕೇಶ್ ಮುಂತಾದವರು ಮನವಿ ಸಲ್ಲಿಸುವ ಸಂದರ್ಭದಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net