ಶಾಸಕ ಪೂಂಜ ವಿರುದ್ಧ ಸ್ಪೀಕರ್‌ಗೆ ದೂರು : ಮಸೀದಿಗಳಲ್ಲಿ ಶಸ್ತ್ರಾಸ್ತ್ರ ಹೇಳಿಕೆ ಕ್ರಮಕ್ಕೆ ಆಗ್ರಹ

harish poonja
ಶಾಸಕ ಹರೀಶ್ ಪೂಂಜರ ’ಮಸೀದಿಗಳಲ್ಲಿ ಶಸ್ತ್ರಾಸ್ತ್ರ’ ಹೇಳಿಕೆ ವಿರೋಧಿಸಿ ತಾ.ಜಮಾಅತ್ ಗಳ ಒಕ್ಕೂಟದಿಂದ ಠಾಣೆಗೆ ದೂರು ನೀಡಲಾಯಿತು.
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಮುಸ್ಲಿಂ ಸಮುದಾಯದ ಧಾರ್ಮಿಕ ಆರಾಧನಾ ಕೇಂದ್ರಗಳಾದ ಮಸೀದಿ ಮತ್ತು ಮದರಸಗಳಲ್ಲಿ ಅಕ್ರಮ ಚಟುವಟಿಕೆಗಳಿಗೆ ಶಸ್ತ್ರಾಸ್ತ್ರಗಳನ್ನು ಪೇರಿಸಿಡಲಾಗಿದೆ ಎಂದು ದ್ವೇಷಪೂರಿತವಾಗಿ ಹೇಳಿಕೆ ನೀಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಬೆಳ್ತಂಗಡಿ ತಾಲೂಕು ಜಮಾಅತ್‌ಗಳ ಒಕ್ಕೂಟದಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಗೂ ವಿಧಾನ ಸಭೆಯ ಸ್ಪೀಕರ್‌ಗೆ ಶನಿವಾರ ಲಿಖಿತ ದೂರು ಸಲ್ಲಿಸಲಾಯಿತು.

ತಾಲೂಕಿನ ಜಮಾಅತ್ ಅಧ್ಯಕ್ಷ, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಮತ್ತು ಆಯಾಯಾ ಪ್ರದೇಶದ ಜಮಾಅತ್ ಪ್ರಮುಖರನ್ನೊಳಗೊಂಡ ಪಕ್ಷ ಮತ್ತು ವಿವಿಧ ಸಂಘಟನಾ ಅತೀತವಾದ ’ತಾಲೂಕು ಜಮಾಅತ್‌ಗಳ ಒಕ್ಕೂಟ’ ನೇತೃತ್ವದಲ್ಲಿ ಸಾಮೂಹಿಕ ನಾಯಕತ್ವದೊಂದಿಗೆ ಜಮೀಯತುಲ್ ಫಲಾಹ್ ಸಭಾಂಗಣದಲ್ಲಿ ಸಮಾಲೋಚನಾ ಸಭೆ ನಡೆಸಿ ಬಳಿಕ ಈ ದೂರು ಸಲ್ಲಿಸಲಾಯಿತು.

ಪೊಲೀಸ್ ಇನ್ಸ್‌ಪೆಕ್ಟರ್ ಬಿ.ಜಿ.ಸುಬ್ಬಾಪುರಮಠ್ ದೂರು ಅರ್ಜಿ ಸ್ವೀಕರಿಸಿ, ಮೇಲಧಿಕಾರಿಗಳ ನಿರ್ದೇಶನದಂತೆ ಕ್ರಮ ಜರುಗಿಸುವ ಭರವಸೆ ನೀಡಿದರು. ಈ ನಿಯೋಗದಲ್ಲಿ ತಾಲೂಕಿನ ವಿವಿಧ ಜಮಾಅತ್‌ಗಳ ಪದಾಧಿಕಾರಿಗಳು, ಸಮುದಾಯ ಮುಖಂಡರುಗಳು ಇದ್ದರು. ಕಾನೂನು ತಜ್ಞರು ಸಭೆಗೆ ಸೂಕ್ತ ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net