

ವಿಜಯವಾಣಿ ಸುದ್ದಿಜಾಲ ಧಾರವಾಡ
ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ನ. 21ರಿಂದ 22ರವರೆಗೆ ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ನ. 21ರಂದು ಬೆಳಗ್ಗೆ 10 ಗಂಟೆಯಿಂದ ಹಾಗೂ ಮಧ್ಯಾಹ್ನ 2.30ರಿಂದ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜನರ ಕುಂದುಕೊರತೆ ಅಹವಾಲುಗಳನ್ನು ಸ್ವೀಕರಿಸಿ, ವಿಚಾರಣೆ ನಡೆಸಲಿದ್ದಾರೆ. ಸರ್ಕಾರಿ ಅಧಿಕಾರಿ, ನೌಕರರಿಂದ ಕೆಲಸದಲ್ಲಿ ವಿಳಂಬ ಆಗಿದ್ದರೆ ಅಥವಾ ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ದುರಾಡಳಿತದಲ್ಲಿ ತೊಡಗಿದ್ದರೆ, ಅದರಿಂದ ತೊಂದರೆಗೊಳಗಾದ ಜನರು ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ದಾಖಲೆಗಳೊಂದಿಗೆ ಸಲ್ಲಿಸಬಹುದು.
ನ. 22ರಂದು ಬೆಳಗ್ಗೆ 10.30ಕ್ಕೆ ಹಾಗೂ ಮಧ್ಯಾಹ್ನ 2.30ರಿಂದ ಆಲೂರು ವೆಂಕಟರಾವ್ ಭವನದಲ್ಲಿ ಜಿಲ್ಲೆಗೆ ಸಂಬಂಧಿಸಿ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ (ಉಪಲೋಕಾಯುಕ್ತರ ಕಾರ್ಯ ವ್ಯಾಪ್ತಿಗೆ ಒಳಪಡುವ ಪ್ರಕರಣಗಳಲ್ಲಿ) ತನಿಖೆ, ವಿಚಾರಣೆಗೆ ಬಾಕಿಯಿರುವ ಪ್ರಕರಣಗಳಿಗೆ ಸಂಬಂಧಿಸಿದ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತಿ ವಿಚಾರಣೆ ನಡೆಸಲಿದ್ದಾರೆ. ದೂರುದಾರರು ನಿಗದಿತ ಸಮಯದಲ್ಲಿ ಹಾಜರಿದ್ದು, ಸದುಪಯೋಗ ಪಡೆಯಬೇಕು ಎಂದು ಪ್ರಕಟಣೆ ತಿಳಿಸಿದೆ.