ಪೌರ ಕಾರ್ಮಿಕರಿಂದ ನಾಗರೀಕರ ಆರೋಗ್ಯಕ್ಕೆ ಪೂರಕ ಕೆಲಸ

21 ckm 3
ಚಿಕ್ಕಮಗಳೂರಿನ ನೇತಾಜಿ ಸುಭಾಷ್ ಚಂದ್ರಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಪೌರಕಾರ್ಮಿಕರ ಕ್ರೀಡಾಕೂಟವನ್ನು ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್ ವಾಲೀಬಾಲ್ ಆಡುವ ಮೂಲಕ ಉದ್ಘಾಟಿಸಿದರು. ಶಾಸಕ ಎಚ್.ಡಿ.ತಮ್ಮಯ್ಯ, ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ, ಎಸ್.ಎಲ್.ಭೋಜೇಗೌಡ ಉಪಸ್ಥಿತರಿದ್ದರು.
Published on

ಚಿಕ್ಕಮಗಳೂರು: ಪ್ರಪಂಚದ ಯಾವುದೇ ನಗರ ಸ್ವಚ್ಚವಾಗಿರುವ ಜೊತೆಗೆ ನಾಗರೀಕರ ಆರೋಗ್ಯ ಚೆನ್ನಾಗಿರಬೇಕಾದರೆ ಪೌರ ಕಾರ್ಮಿಕರ ಪರಿಶ್ರಮ ಮೂಲ ಕಾರಣ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಅಭಿಪ್ರಾಯಪಟ್ಟರು.

ನಗರದ ನೇತಾಜಿ ಸುಭಾಷ್ ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ನಗರಸಭೆ, ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಆಶ್ರಯದಲ್ಲಿ ಶನಿವಾರ ಆಯೋಜಿಸಲಾಗಿದ್ದ ಪೌರ ಕಾರ್ಮಿಕರ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲ ನಾಗರೀಕರ ಆರೋಗ್ಯಕ್ಕೆ ಪೂರಕವಾಗಿ ಸೇವೆ ಸಲ್ಲಿಸುವ ಪೌರ ಕಾರ್ಮಿಕರ ಆರೋಗ್ಯ ಸಹ ಚೆನ್ನಾಗಿರಬೇಕು ಎಂಬ ಉz್ದೆÃಶದಿಂದ ಸರ್ಕಾರ ಪೌರ ಕಾರ್ಮಿಕರಿಗೆ ನಗರಸಭೆಯಿಂದ ಕ್ರೀಡಾಕೂಟಗಳನ್ನು ಏರ್ಪಡಿಸಿ ಅವರ ಮಾನಸಿಕ ಹಾಗೂ ದೈಹಿಕವಾಗಿ ಗಟ್ಟಿಗೊಳ್ಳಲು ಕ್ರೀಡೆ ಸಹಕಾರಿಯಾಗಿದೆ ಎಂದರು.
ಈ ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ಪೌರ ಕಾರ್ಮಿಕರು ಎಲ್ಲಾ ಒತ್ತಡಗಳನ್ನು ಕಡಿಮೆ ಮಾಡಿಕೊಳ್ಳಿ ಎಂದು ಶುಭ ಹಾರೈಸಿದರು.
ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ, ಕಾಯಕವೇ ಕೈಲಾಸ ಎಂಬ ತತ್ವದಂತೆ ಕೆಲಸ ಮಾಡುವ ಪೌರ ಕಾರ್ಮಿಕರು ಚಿಕ್ಕಮಗಳೂರು ನಗರದ ಸ್ವಚ್ಛತೆಯ ಜೊತೆಗೆ ನಾಗರೀಕರ ಆರೋಗ್ಯ ರಕ್ಷಣೆಗೆ ತಮ್ಮದೇ ಆದ ಕೊಡುಗೆಯನ್ನು ಸ್ವಚ್ಚತೆ ಮಾಡುವ ಮೂಲಕ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.
ಎಲ್ಲಿ ಸ್ವಚ್ಛತೆ ಇರುತ್ತದೋ ಅಲ್ಲಿ ಭಗವಂತ ನೆಲೆಸಿರುತ್ತಾನೆ ಎಂಬುದು ನಂಬಿಕೆಯಾಗಿದೆ. ನಾಗರೀಕರ ಆರೋಗ್ಯ ಮತ್ತು ಸ್ವಚ್ಛತೆಗೆ ಗಮನ ಕೊಟ್ಟು ಕೆಲಸ ನಿರ್ವಹಿಸುತ್ತಿರುವ ನಿಮ್ಮೆಲ್ಲ ಪೌರ ಕಾರ್ಮಿಕರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಮಾತನಾಡಿ, ಪೌರಕಾರ್ಮಿಕರು ದಿನನಿತ್ಯ ಸ್ವಚ್ಚತಾ ಕಾರ್ಯ ಕೈಗೊಳ್ಳುವ ಮೂಲಕ ನಗರದ ನಾಗರೀಕರ ಆರೋಗ್ಯ ಕಾಪಾಡುವ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಈ ಕ್ರೀಡಾಕೂಟ ಹಾಗೂ ಪೌರ ಕಾರ್ಮಿಕರ ದಿನಾಚರಣೆ ಪೌರ ಕಾರ್ಮಿಕರಿಗೆ ಸುದಿನವಾಗಿದೆ. ದಿನಪೂರ್ತಿ ಕ್ರೀಡೆಯಲ್ಲಿ ಭಾಗವಹಿಸಿ ಸದೃಢ ಆರೋಗ್ಯವಂತರಾಗಿ ಎಂದರು.
ಅಧ್ಯಕ್ಷತೆ ವಹಿಸಿದ್ದ ನಗರಸಭಾಧ್ಯಕ್ಷೆ ಸುಜಾತ ಶಿವಕುಮಾರ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರು ಸ್ವಚ್ಚ ಭಾರತ್‌ಗೆ ಕರೆನೀಡಿದ್ದಾರೆ. ಅದರಂತೆ ಪ್ರತಿ ಮನೆಮನೆಯಲ್ಲಿ ಸ್ವಚ್ಚತೆ ಕಾಪಾಡುವ ಪ್ರಯೋಜನಕಾರಿ ಕಾರ್ಯಕ್ರಮವಾಗಬೇಕಿದೆ. ಈ ನಿಟ್ಟಿನಲ್ಲಿ ಪೌರಕಾರ್ಮಿಕರ ಪಾದಪೂಜೆ ಮಾಡುವ ಮೂಲಕ ಗೌರವ ಸಲ್ಲಿಸಲಾಗಿದೆ ಎಂದು ಹೇಳಿದರು.
ಪ್ರಸ್ತುತ ಅನಾರೋಗ್ಯ ಕಾಡುತ್ತಿರುವ ಈ ಸಂದರ್ಭದಲ್ಲಿ ಪೌರ ಕಾರ್ಮಿಕರನ್ನು ದೇವರಂತೆ ಕಾಣಬೇಕಾಗಿರುವುದು ಅಗತ್ಯ. ಸ್ವಚ್ಚತೆ ಆರೋಗ್ಯದ ಒಂದು ಭಾಗವಾಗಿವೆ. ಕ್ರೀಡೆಗಳು ಸದೃಢ ಆರೋಗ್ಯಕ್ಕೆ ಪೂರಕವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯ ಕುಮಾರ್, ನಗರಸಭೆ ಆಯುಕ್ತ ಬಿ.ಸಿ.ಬಸವರಾಜ್, ಪೌರ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಎನ್.ಅಣ್ಣಯ್ಯ, ಗೌರವಾಧ್ಯಕ್ಷ ನಾಗರಾಜ್, ಶಾಖಾ ಸಂಘದ ಅಧ್ಯಕ್ಷ ಶ್ರೀನಿವಾಸ್, ಆರೋಗ್ಯ ನಿರೀಕ್ಷಕರಾದ ಶಶಿರಾಜ್ ಅರಸ್, ನಾಗಪ್ಪ, ವೆಂಕಟೇಶ್, ರಂಗಪ್ಪ, ಈಶ್ವರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net