

ಕೆ.ಆರ್.ಸಾಗರ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಬುಧವಾರ ಕೆ.ಆರ್.ಸಾಗರ ಬೃಂದಾವನದಲ್ಲಿರುವ ಖಾಸಗಿ ಹೋಟೆಲ್‌ನ ಸಭಾಂಗಣದಲ್ಲಿ 300 ಕೋಟಿ ರೂ.ವೆಚ್ಚದಲ್ಲಿ ಕೈಗೊಂಡಿರುವ ವಿಶ್ವೇಶ್ವರಯ್ಯ ನಾಲೆ ಆಧುನೀಕರಣ ಕಾಮಗಾರಿ ಕುರಿತು ಹಾಗೂ ನಾಲೆಗೆ ನೀರು ಹರಿಸುವ ಸಂಬಂಧ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು.
ವಿಶ್ವೇಶ್ವರಯ್ಯ ನಾಲೆಯು ಕೃಷ್ಣರಾಜಸಾಗರದ ಜಲಾಶಯದ ಎಡದಂಡೆಯಿಂದ ಪ್ರಾರಂಭಗೊಳ್ಳುತ್ತದೆ. ಎರಡು ವರ್ಷಗಳಿಂದ ನಾಲೆ ಆಧುನೀಕರಣ ಕಾಮಗಾರಿ ನಡೆಯುತ್ತಿದ್ದು 24 ಕಿಮೀ ಪೂರ್ಣಗೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಬಳಿಕ ಮಾತನಾಡಿದ ಸಚಿವರು, ಕೆ.ಆರ್.ಸಾಗರ ಅಣೆಕಟ್ಟೆಯಿಂದ ವಿ.ಸಿ ನಾಲೆಗೆ ನೀರು ಬಿಡುಗಡೆ ಮಾಡಲು ಹಾಗೂ ರೈತರಿಗೆ ತೊಂದರೆಯಾಗದಂತೆ ಉಳಿದ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಎಂದರು.
ನಂತರ ಸಚಿವರ, ಶಾಸಕರು ಹಾಗೂ ಅಧಿಕಾರಿಗಳು ನಾಲೆ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದರು. ಶಾಸಕರಾದ ರಮೇಶ ಬಾಬು ಬಂಡಿಸಿದ್ದೇಗೌಡ, ದರ್ಶನ್ ಪುಟ್ಟಣಯ್ಯ, ಪಿ.ರವಿಕುಮಾರ್, ವಿಧಾನ ಪರಿಷತ್ ಸದಸ್ಯರಾದ ಮಧು ಮಾದೇಗೌಡ, ದಿನೇಶ್ ಗೂಳಿಗೌಡ, ಕಾ.ನೀ.ನಿಗಮ ಎಂ.ಡಿ ಮಹೇಶ್, ಜಿಲ್ಲಾಧಿಕಾರಿ ಡಾ ಕುಮಾರ್, ಕಾ.ನೀ.ನಿಗಮದ ಅಧೀಕ್ಷಕ ಇಂಜಿನಿಯರ್ ರಘುರಾಂ, ಕಾರ್ಯಪಾಲಕ ಇಂಜಿನಿಯರ್ ಜಯಂತ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಜಯರಾಂ ಇದ್ದರು.
ಸಿಎಂ ಯಾವುದೇ ಒತ್ತಡಕ್ಕೆ ಮಣಿಯಲ್ಲ