ನಿಗದಿತ ಸಮಯಕ್ಕೆ ರ್ಪೂಣಗೊಳಿಸಿ

Vijayavani-Featured-Image
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಪ್ರಸಕ್ತ ಸಾಲಿನ ಪೂರ್ವ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಆರಂಭವಾಗಿದ್ದು, ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಗಳನ್ನು ಸ್ವತಃ ಛಾಯಾಚಿತ್ರ ಸಮೇತ ಸಮೀಕ್ಷೆ ಮಾಡಬಹುದು. ರೈತರ ಬೆಳೆ ಸಮೀಕ್ಷೆ ಮೊಬೈಲ್​ ತಂತ್ರಾಂಶ ಅಥವಾ ಖಾಸಗಿ ನಿವಾಸಿಗಳ ಬೆಳೆ ಸಮೀಕ್ಷೆ ಮೊಬೈಲ್​ ತಂತ್ರಾಂಶ ಮೂಲಕ ಬೆಳೆ ಸಮೀಕ್ಷೆ ಕೈಗೊಳ್ಳಬಹುದು. ಪೂರ್ವ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ರೈತರು ಒಂದು ವಾರದಲ್ಲಿ ರ್ಪೂಣಗೊಳಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಕಿರಣಕುಮಾರ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಬೆಳೆ ಸಮೀಕ್ಷೆ ದತ್ತಾಂಶವನ್ನು ಕೃಷಿ, ತೋಟಗಾರಿಕೆ, ರೇಷ್ಮೆ ಬೆಳೆಗಳ ವಿಸ್ತೀರ್ಣ ಲೆಕ್ಕ ಹಾಕುವ ಕಾರ್ಯದಲ್ಲಿ ಬೆಳೆ ವಿಮೆ ಯೋಜನೆಯ ಸರ್ವೇ ನಂಬರ್​ವಾರು ಬೆಳೆ ಪರಿಶೀಲನೆ ನಡೆಯಲಿದೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯ ಅರ್ಹ ಫಲಾನುಭವಿ ಗುರುತಿಸಲು, ಆರ್​ಟಿಸಿಯಲ್ಲಿ ಬೆಳೆ ವಿವರ ದಾಖಲಾತಿ, ಎನ್​ಡಿಆರ್​ಎಫ್​, ಎಸ್​ಡಿಆರ್​ಎಫ್ ಅಥವಾ ಪ್ರಕತಿ ವಿಕೋಪ ಸಂದರ್ಭದಲ್ಲಿ ಬೆಳೆ ಹಾನಿ ಕುರಿತು ವರದಿ ಸಿದ್ಧಪಡಿಸಲು, ಬ್ಯಾಂಕ್​ಗಳಲ್ಲಿ ಬೆಳೆ ಸಾಲ ಪಡೆಯುವ ಮತ್ತು ಅರ್ಹ ಲಾನುಭವಿಗಳ ಪಟ್ಟಿ ತಯಾರಿಸುವಾಗ ಬೆಳೆ ಸಮೀಕ್ಷೆ ಆಧಾರವಾಗಿಟ್ಟಕೊಂಡು ಸಿದ್ಧಪಡಿಸುವುದರಿಂದ ರೈತರು ತಪ್ಪದೆ ತಮ್ಮ ಜಮೀನಿನಲ್ಲಿನ ಕೃಷಿ, ತೋಟಗಾರಿಕೆ, ಅರಣ್ಯ, ರೇಷ್ಮೆ ಬೆಳೆಗಳ ವಿವರವನ್ನು ಆ್ಯಪ್​ನಲ್ಲಿ ನಮೂದಿಸಬೇಕು.
ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿ, ಸಹಾಯಕ ತೋಟಗಾರಿಕೆ ಅಧಿಕಾರಿ, ರೇಷ್ಮೆ ಇಲಾಖೆ ಅಧಿಕಾರಿಗಳನ್ನು ಸಂಪಕಿರ್ಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net