ನಿಗದಿತ ಸಮಯದೊಳಗೆ ಸಾರ್ವಜನಿಕರ ಕೆಲಸ ಮಾಡಿ: ಡಾ.ಯತೀಂದ್ರ ಸಿದ್ದರಾಮಯ್ಯ

18
Published on

ಮೈಸೂರು:  ಕಂದಾಯ ಇಲಾಖೆ ಸಮಸ್ಯೆಗಳು ಸೇರಿದಂತೆ ಇತರ ಇಲಾಖೆಯ ಎಲ್ಲ್ಲ ಸಮಸ್ಯೆಗಳನ್ನು ನಿಗದಿತ ಸಮಯದೊಳಗೆ ಅಧಿಕಾರಿಗಳು ಮಾಡಿಕೊಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ವರುಣ ಕ್ಷೇತ್ರದ ನಂದಿಗುಂದ, ನಂದಿಗುಂದಪುರ, ತುಂನೇರಳೆ, ಮರಡಿಹುಂಡಿ ಗ್ರಾಮಗಳಲ್ಲಿ ಬುಧವಾರ ಸಾರ್ವಜನಿಕರಿಂದ ಅಹವಾಲು ಸ್ವೀಕಾರ, ಕಂದಾಯ ಅದಾಲತ್, ಪೋಡಿ ಅದಾಲತ್, ಇ-ಸ್ವತ್ತು ಅದಾಲತ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಾರ್ವಜನಿಕರನ್ನು ಅಲೆದಾಡಿಸದೆ ಕೆಲಸ ಮಾಡಿಕೊಡಬೇಕು. ನಮ್ಮ ಸರ್ಕಾರ ನುಡಿದಂತೆ ನಡೆದು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಯೋಜನೆಗಳು ಜನರಿಗೆ ಸರಿಯಾಗಿ ಪ್ರತಿಯೊಬ್ಬರಿಗೂ ತಲುಪುವಂತೆ ನೋಡಿಕೊಳ್ಳಬೇಕು ಎಂದರು.

ಈ ಯೋಜನೆಗಳಿಂದ ಜನರ ಆರ್ಥಿಕ ಆದಾಯ ಹೆಚ್ಚಾಗಿದ್ದು ಮಹಿಳೆಯರು ಸದೃಢರಾಗಲು ಸಹಾಯಕವಾಗಿದೆ. ನಿಮ್ಮ ಎಲ್ಲ ಸಮಸ್ಯೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದು ಹಂತಹಂತವಾಗಿ ಪರಿಹರಿಸಲಾಗುವುದು ಎಂದರು.

ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಕೆ.ಎಂ.ವಿಜಯ್, ವಿವಿಧ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಮುದ್ದೇಗೌಡ, ರಂಗಸ್ವಾಮಿ, ತಾಪಂ ಮಾಜಿ ಸದಸ್ಯರಾದ ಶಾಂತಮ್ಮ, ಮಂಜುಳಾ ಮಂಜುನಾಥ್, ಸಿ.ಎಂ. ಸಿದ್ದರಾಮೇಗೌಡ, ಜಿಪಂ ಮಾಜಿ ಸದಸ್ಯ ಮಹಾದೇವ, ಮುಖಂಡರಾದ ಸೋಮು, ಮರಯ್ಯ, ಬಾಬು, ರವಿ, ಉದಯ್, ಮಹಾದೇವು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net