

ಖಾನಾಪುರ: ತಾಲೂಕಿನ ನಂದಗಡ ಗ್ರಾಮಕ್ಕೆ ಜಿಪಂ ಸಿಇಒ ರಾಹುಲ್ ಶಿಂಧೆ ಭಾನುವಾರ ಭೇಟಿ ನೀಡಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಪರಿಶೀಲನೆ ಮಾಡಿದರು.
ಗ್ರಾಮದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಸಮೀಕ್ಷೆ ಬಾಕಿ ಇರುವವರ ಮಾಹಿತಿ ಪಡೆದರು. ನಿಗದಿತ ನಮೂನೆಯಲ್ಲಿ ಸಮೀಕ್ಷೆ ಕೈಗೊಳ್ಳಲು ಬಾಕಿಯಿರುವ ಸಾರ್ವಜನಿಕರ ಮಾಹಿತಿ ಒದಗಿಸುವಂತೆ ಜಿಲ್ಲಾ ಹಿಂದುಳಿದ ವರ್ಗಗಳ ಅಧಿಕಾರಿಗಳು ಹಾಗೂ ತಹಸೀಲ್ದಾರ್ಗೆ ಸೂಚನೆ ನೀಡಿದರು.
ನಂದಗಡ ಗ್ರಾಪಂ ವ್ಯಾಪ್ತಿಯಲ್ಲಿ ಸಾವಿರಕ್ಕೂ ಹೆಚ್ಚು ಜನರ ಸಮೀಕ್ಷೆ ಆಗಬೇಕಿರುವುದರಿಂದ ತ್ವರಿತವಾಗಿ ಕಾರ್ಯ ಕೈಗೊಳ್ಳಬೇಕು. ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಬಾಕಿಯಿರುವ ಸಮೀಕ್ಷೆ ಬೇಗನೆ ಪೂರ್ಣಗೊಳಿಸಬೇಕೆಂದು ನಿರ್ದೇಶನ ನೀಡಿದರು.
ರಾಯಣ್ಣನ ವೀರಭೂಮಿಗೆ ಭೇಟಿ: ಇಲ್ಲಿನ ಕ್ರಾಂತಿವೀರ ಶ್ರೀ ಸಂಗೊಳ್ಳಿ ರಾಯಣ್ಣನ ವೀರಭೂಮಿಗೆ (ಮ್ಯೂಸಿಯಂ) ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು. ರಾಯಣ್ಣನ ಸಮಾಧಿ ಸ್ಥಳ ಹಾಗೂ ಕೆರೆ ಅಭಿವೃದ್ಧಿ ಸ್ಥಳ ವೀಕ್ಷಿಸಿದರು. ಜಿಪಂ ಮುಖ್ಯ ಯೋಜನಾಧಿಕಾರಿ ಗಂಗಾಧರ ದಿವಟರ್, ವಿವಿಧ ಇಲಾಖೆಯ ಜಿಲಾ ಮತ್ತು ತಾಲೂಕುಮಟ್ಟದ ಅಧಿಕಾರಿಗಳು, ಗ್ರಾಪಂ ಅಧ್ಯರು, ಸದಸ್ಯರು ಇತರರಿದ್ದರು.