

ಚಳ್ಳಕೆರೆ: ಮಿನಿ ವಿಧಾನಸೌಧದ ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದು, ಈಗಾಗಲೇ ಜಿಲ್ಲಾಡಳಿತಕ್ಕೆ ಹಸ್ತಾಂತರ ಮಾಡಲಾಗಿದೆ ಎಂದು ಉಪವಿಭಾಗಾಧಿಕಾರಿ ಕಾರ್ತಿಕ್ ತಿಳಿಸಿದರು.
ತಾಲೂಕು ನೂತನ ಕಚೇರಿಗೆ (ಮಿನಿ ವಿಧಾನಸೌಧ) ಬುಧವಾರ ಭೇಟಿ ನೀಡಿ ಪರಿಶೀಲನೆ ಬಳಿಕ ಮಾತನಾಡಿ, ಶೌಚಗೃಹ ಮತ್ತು ಮೂಲಸೌಕರ್ಯಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ 87 ಲಕ್ಷ ರೂ. ವೆಚ್ಚದ ಕಾಮಗಾರಿ ಸಕಾಲಕ್ಕೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಪಿಡಬ್ಲುೃಡಿ ಎಇಇ ವಿಜಯಭಾಸ್ಕರ್ ಮಾತನಾಡಿ, 77 ಲಕ್ಷ ರೂ. ವೆಚ್ಚದ ಶೌಚಗೃಹ ಕಾಮಗಾರಿ, ನೀರಿನ ಅನುಕೂಲ ಕಲ್ಪಿಸುವ ವ್ಯವಸ್ಥೆಗೆ ಕ್ರಮ ವಹಿಸಲಾಗಿದೆ. ಉಳಿದ 10 ಲಕ್ಷ ರೂ. ವೆಚ್ಚದ ವಿದ್ಯುತ್ ಸಂಪರ್ಕ ಕೆಲಸ ಕೂಡ ಆಗುತ್ತಿದೆ ಎಂದು ಮಾಹಿತಿ ನೀಡಿದರು.
ತಹಸೀಲ್ದಾರ್ ರೇಹಾನ್ ಪಾಷಾ, ಶಿರಸ್ತೇದಾರ್ ಗಿರೀಶ್ ಮತ್ತಿತರರು ಇದ್ದರು.