

ರಾಯಚೂರು: ಮುಂಗಾರು ಮತ್ತು ಹಿಂಗಾರು ವೈಲ್ಯದಿಂದ ರಾಜ್ಯದಲ್ಲಿ ತೀವ್ರ ಬರ ಸ್ಥಿತಿಯಿದ್ದು, ಸರ್ಕಾರ ಕೂಡಲೇ ರೈತರ ಸಾಲವನ್ನು ಸಂಪೂರ್ಣ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸ್ಥಳೀಯ ಜಿಲ್ಲಾಕಾರಿ ಕಚೇರಿ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.
ನಂತರ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ಬರದಿಂದ ರೈತರು ಸಂಕಷ್ಟದಲ್ಲಿದ್ದರೂ ಸರ್ಕಾರಗಳು ನಿದ್ರಾವಸ್ಥೆಯಲ್ಲಿದ್ದು, ಅಪಾರ ಪ್ರಮಾಣದ ಬೆಳೆ ನಷ್ಟವಾಗಿದ್ದರೂ ನಯಾ ಪೈಸೆ ಪರಿಹಾರ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತುಂಗಭದ್ರಾ ಎಡದಂಡೆ ಕಾಲುವೆ ಕೊನೆಭಾಗದ ರೈತರ ನೀರಿನ ಸಮಸ್ಯೆ ನಿವಾರಣೆ ನಿಟ್ಟಿನಲ್ಲಿ ನವಲಿ ಹತ್ತಿ ಸಮಾನಾಂತರ ಜಲಾಶಯ ನಿರ್ಮಾಣ ಮಾಡಬೇಕು. ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಳ ಮಾಡಬೇಕು. ಕೆರೆಗಳ ಹೂಳೆತ್ತಿ ನೀರು ತುಂಬಿಸಬೇಕು.
ಸ್ವಾಮಿನಾಥನ್ ವರದಿ ಜಾರಿ ಮಾಡಬೇಕು. ಡಿ.ರಾಂಪುರ ಏತ ನೀರಾವರಿ ಯೋಜನೆಗಾಗಿ ನಿರ್ಮಿಸಿರುವ ತಡೆಗೋಡೆಯನ್ನು ದುರಸ್ತಿಗೊಳಿಸಬೇಕು. ಸಲ್ ಭೀಮಾ ಯೋಜನೆ ಅಕ್ರಮ ಕುರಿತು ಸಮಗ್ರ ತನಿಖೆ ನಡೆಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ನರಸಿಂಹ ನಾಯಕ, ಪದಾಕಾರಿಗಳಾದ ಸತ್ಯರೆಡ್ಡಿ, ಧರ್ಮರೆಡ್ಡಿ, ಕೆ.ರಂಗನಾಥ, ಈರಣ್ಣ, ಶಿವಶರಣ ಸಾಹುಕಾರ, ಸಂಗಮೇಶ ನಾಯಕ, ಹನುಮೇಶ ನಾಯಕ, ಮಲ್ಲನಗೌಡ, ನರಸಿಂಹರೆಡ್ಡಿ, ಜಂಗ್ಲಿ ಪೀರ್‌ಸಾಬ್, ದೇವಿಕಾ ದೊರೆ, ಗಣೇಶ ಪಾಲ್ಗೊಂಡಿದ್ದರು.