

ಲಿಂಗಸುಗೂರು: ತಾಲೂಕಿನ ಮುದಗಲ್ ಹಾಗೂ ಚಿತ್ತಾಪುರ, ನರಕಲದಿನ್ನಿ ಗ್ರಾಮಗಳಿಗೆ ಜಿಪಂ ಸಿಇಒ ಈಶ್ವರ ಕುಮಾರ ಕಾಂದೂ ಶನಿವಾರ ಭೇಟಿ ನೀಡಿ, ವಿವಿಧ ಕಾಮಗಾರಿ ಪರಿಶೀಲಿಸಿದರು.
ಇದನ್ನೂ ಓದಿ: 1.4 ಕೋಟಿ ವೆಚ್ಚದಲ್ಲಿ ಸಿ.ಸಿ.ರಸ್ತೆ ಕಾಮಗಾರಿ
ಚಿತ್ತಾಪುರ ಗ್ರಾಪಂ ವ್ಯಾಪ್ತಿಯ ಬಹುಗ್ರಾಮ ಕುಡಿವ ನೀರಿನ ಕಾಮಗಾರಿ ವೀಕ್ಷಣೆ ಮಾಡಿದರು. ಪ್ರಗತಿ ಹಂತದಲ್ಲಿರುವ 160 ಎಂಎಲ್‌ಡಿ ಸಾಮರ್ಥ್ಯದ ನೀರಿನ ಶುದ್ಧೀಕರಣ ಘಟಕ ಹಾಗೂ ಕ್ಲಾರಿಫ್ಲೋಕುಲೇಟರ್ ಘಟಕಗಳನ್ನು ಪರಿಶೀಲಿಸಿದರು.
ನಾರಾಯಣಾಪುರ ಅಣೆಕಟ್ಟಿನ ಜಾಕ್‌ವೆಲ್ ಕಂ ಪಂಪ್‌ಹೌಸ್ ಡಿಸೈನ್ ಹಾಗೂ ಕಾಮಗಾರಿ ಪ್ರಗತಿ ಕುರಿತು ಮಾಹಿತಿ ಪಡೆದರು. ಮುದಗಲ್‌ನ ಸ್ಟಾಕ್‌ಯಾರ್ಡ್ ಕ್ಯಾಂಪ್‌ಗೆ ಭೇಟಿ ನೀಡಿ ಬಹುಗ್ರಾಮ ಕುಡಿವ ನೀರಿನ ವಿವಿಧ ಘಟಕಗಳ ಕಾಮಗಾರಿ ಪರಿಶೀಲಿಸಿ, ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಎಸ್‌ಎನ್‌ಸಿ ಗುತ್ತಿಗೆದಾರರಿಗೆ ಸೂಚಿಸಿದರು.
ತಾಪಂ ಇಒ ಉಮೇಶ, ಸಹಾಯಕ ನಿರ್ದೇಶಕ ಪಂಪನಗೌಡ ಪಾಟೀಲ್, ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆ ಎಇಇ ಪರಮೇಶ್ವರ ಟೆಂಗಳೀಕರ್ ಇತರರಿದ್ದರು.