ಸರ್ಕಾರಿ ಶಾಲೆ ಮಕ್ಕಳಿಗೆ ಸಮಗ್ರ ಪ್ರಶಸ್ತಿ

20-GPT-5A
ಗುಂಡ್ಲುಪೇಟೆ ತಾಲೂಕಿನ ವಡ್ಡಗೆರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.
Published on

ಗುಂಡ್ಲುಪೇಟೆ: ಶುಕ್ರವಾದ ಕೊಡಸೋಗೆಯಲ್ಲಿ ನಡೆದ ವಡ್ಡಗೆರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ತಾಲೂಕಿನ ಕೊಡಸೋಗೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಪಡೆದುಕೊಂಡರು.

ವಿಜೇತ ವಿದ್ಯಾರ್ಥಿಗಳಿಗೆ ವೀರಶೈವ ಮಹಾಸಭಾ ಮಾಜಿ ಜಿಲ್ಲಾಧ್ಯಕ್ಷ ಕೊಡಸೋಗೆ ಶಿವಬಸಪ್ಪ ಪ್ರಮಾಣಪತ್ರ ವಿತರಣೆ ಮಾಡಿದರು. ಮುಖ್ಯಶಿಕ್ಷಕ ಮುಕ್ತಾರ್ ಪಾಷ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್, ಸಿಆರ್‌ಪಿ ಶಿವಕುಮಾರ, ಶಿಕ್ಷಕರಾದ ಶಿವನಂಜಪ್ಪ, ವಿ.ಇ ನಾಗೇಂದ್ರ, ಮುಖಂಡರಾದ ಮಲ್ಲಿಕಾರ್ಜುನಪ್ಪ, ದೊರೆಸ್ವಾಮಿ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net