ಜೀವನ್ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

IMG-20240826-WA0282
Published on

ಅರಸೀಕೆರೆ ಗ್ರಾಮಾಂತರ: ತಾಲೂಕಿನ ಬಾಣಾವರ ಪಟ್ಟಣದಲ್ಲಿ ಸೋಮವಾರ ನಡೆದ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಜೀವನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕರು ಹಾಗೂ ಬಾಲಕಿಯರು ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದು, ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.


ಮುಖ್ಯಶಿಕ್ಷಕ ಶಿವಮೂರ್ತಿ ಮಾತನಾಡಿ, ಹೋಬಳಿ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುವುದು ತುಂಬಾ ಸಂತೋಷವನ್ನುಂಟು ಮಾಡಿದೆ. ನಮಗೂ ಹಾಗೂ ನಮ್ಮ ಶಾಲೆಗೂ ಹೆಚ್ಚಿನ ಗೌರವ ಬಂದಿದೆ. ಮುಂದಿನ ದಿನಗಳಲ್ಲಿ ನಡೆಯಲಿರುವ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿ ಬರುವಂತೆ ಕಿವಿಮಾತು ಹೇಳಿದರು.


ಸಹಶಿಕ್ಷಕಿ ಜಮುನಾರಾಣಿ ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಶ್ರೀಕೃಷ್ಣ ಹಾಗೂ ರಾಧೆ ವೇಷ ಧರಿಸಿದ ವಿಜೇತರಿಗೆ ಬಹುಮಾನ ವಿತರಿಸಿದರು.
ಶಿಕ್ಷಕ ಧನಂಜಯ ಹಾಗೂ ಸಿಬ್ಬಂದಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net