ಎಸ್‌ಎಂಎಸ್ ಶಾಲೆಗೆ ಸಮಗ್ರ ಪ್ರಶಸ್ತಿ

ಬೆಟ್ಟದಪುರದ ಅಕ್ಕಮಹಾದೇವಿ ಕ್ರೀಡಾಂಗಣದಲ್ಲಿ ನಡೆದ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಎಸ್‌ಎಂಎಸ್ ಶಾಲೆಯು ಸಮಗ್ರ ಪ್ರಶಸ್ತಿ ಪಡೆದ ಹಿನ್ನೆಲೆಯಲ್ಲಿ ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಬೆಟ್ಟದಪುರದ ಅಕ್ಕಮಹಾದೇವಿ ಕ್ರೀಡಾಂಗಣದಲ್ಲಿ ನಡೆದ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಎಸ್‌ಎಂಎಸ್ ಶಾಲೆಯು ಸಮಗ್ರ ಪ್ರಶಸ್ತಿ ಪಡೆದ ಹಿನ್ನೆಲೆಯಲ್ಲಿ ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
Published on

ಬೆಟ್ಟದಪುರ: ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ಅಕ್ಕಮಹಾದೇವಿ ಕ್ರೀಡಾಂಗಣದಲ್ಲಿ ಸೋಮವಾರ ಮತ್ತು ಮಂಗಳವಾರ 2 ದಿನಗಳ ಕಾಲ ಆಯೋಜಿಸಿದ್ದ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಎಸ್‌ಎಂಎಸ್ ಶಾಲೆಯು ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

ವಾಲಿಬಾಲ್ ಪಂದ್ಯದಲ್ಲಿ ಬಾಲಕಿಯರು ಪ್ರಥಮ ಸ್ಥಾನ, ಖೋಖೋ ಪಂದ್ಯದಲ್ಲಿ ಬಾಲಕ ಮತ್ತು ಬಾಲಕಿಯರು ದ್ವಿತೀಯ ಸ್ಥಾನ, ಬಾಲ್ ಬ್ಯಾಡ್ಮಿಂಟನ್ ಪಂದ್ಯದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ.

ವೈಯಕ್ತಿಕ ವಿಭಾಗದಲ್ಲಿ ಸ್ಮಿತಾಶ್ರೀ ಎಂಬ ವಿದ್ಯಾರ್ಥಿನಿ 3000ಮೀ. ಓಟ (ಪ್ರಥಮ),1500ಮೀ. ಓಟ (ಪ್ರ), 800ಮೀ. ಓಟ (ಪ್ರ) ಸ್ಥಾನ ಪಡೆದು, ವೈಯಕ್ತಿಕ ಚಾಂಪಿಯನ್ ಪಟ್ಟ ಪಡೆದುಕೊಂಡಿದ್ದಾರೆ. ರಿಷಿಕಾ 200 ಮೀ. ಓಟ (ಪ್ರ), 400ಮೀ.(ಪ್ರ) ಹಾಗೂ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ವೈಯಕ್ತಿಕ ಚಾಂಪಿಯನ್ ಪಟ್ಟ ಗಿಟ್ಟಿಸಿಕೊಂಡಿದ್ದಾರೆ. ಗೌತಮ 3000 ಮೀ. ಓಟದಲ್ಲಿ ಗೌತಮ್ (ದ್ವಿತೀಯ), 1500 ಮೀ. ಓಟದಲ್ಲಿ ವಂಶಿ(ದ್ವಿ), ಚಕ್ರ ಎಸೆತದಲ್ಲಿ ಭರತ್ (ಪ್ರ), 100 ಮೀ.ಓಟದಲ್ಲಿ (ದ್ವಿ), ತ್ರಿವಿಧ ಜಿಗಿತದಲ್ಲಿ ಶಶಾಂಕ್(ದ್ವಿ), ಎತ್ತರ ಜಿಗಿತದಲ್ಲಿ ಸಾಕ್ಷಿ (ದ್ವಿ) , ಬಾಲಕಿಯರ 4/100 ಮೀ.ರೀಲೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಎಲ್ಲ ವಿದ್ಯಾರ್ಥಿಗಳಿಗೆ ಸಂಸ್ಥೆ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.

ಎಸ್‌ಎಂಎಸ್ ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಬಿ.ವಿ.ಮಂಜುನಾಥ್ ಮಾತನಾಡಿ, ಕ್ರೀಡೆಯು ಆರೋಗ್ಯ ವೃದ್ಧಿಸಲು ಮಾತ್ರವಲ್ಲದೆ ಪಠ್ಯದಲ್ಲಿ ಆಸಕ್ತಿ ಮೂಡಲು ಸಹಾಯಕವಾಗುತ್ತದೆ. ಮಕ್ಕಳು ಕ್ರೀಡಾಕೂಟದಲ್ಲಿ ಸೋಲು ಮತ್ತು ಗೆಲುವು ಎರಡನ್ನೂ ಸಮನಾಗಿ ಸ್ವೀಕರಿಸಿದರೆ ಮಾತ್ರ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ. ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ಮಕ್ಕಳು ದೇಶ ಕಾಯುವ ಯೋಧನಂತೆ ರೂಪುಗೊಳ್ಳುತ್ತಾರೆ. ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಪಡೆಯುವ ಮೂಲಕ ಸಾಧನೆ ಮಾಡಿರುವುದು ಸಂತಸದ ವಿಷಯವಾಗಿದೆ ಎಂದರು.

ಕನ್ನಡ ಮಠದ ಶ್ರೀ ಚನ್ನಬಸವ ದೇಶಿಕೇಂದ್ರ ಸ್ವಾಮೀಜಿ, ಸಂಸ್ಥೆ ಕಾರ್ಯದರ್ಶಿ ಎ.ವಿ.ಛಾಯಾ, ಪ್ರಾಂಶುಪಾಲ ಎಸ್.ಕೆ.ರಾಜ, ಪ್ರೌಢಶಾಲೆ ಮುಖ್ಯಶಿಕ್ಷಕ ಎಸ್.ಆರ್ ವೆಂಕಟೇಶ್, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಸಿ.ಆರ್.ಕುಮಾರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net