ಶ್ರೀ ವಿವೇಕಾನಂದ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

ಶ್ರೀ ವಿವೇಕಾನಂದ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ
Published on

ಹನೂರು: ಪಟ್ಟಣದ ಕ್ರಿಸ್ತರಾಜ ಹಾಗೂ ಶ್ರೀ ವಿವೇಕಾನಂದ ಶಾಲೆಯಲ್ಲಿ 2 ದಿನಗಳ ಕಾಲ ನಡೆದ ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಶ್ರೀ ವಿವೇಕಾನಂದ ಶಾಲೆಯ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಜಯಗಳಿಸಿದ್ದಾರೆ.

ಥ್ರೋ ಬಾಲ್ ಪಂದ್ಯದಲ್ಲಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಕಬಡ್ಡಿ ಹಾಗೂ ಖೋ-ಖೋದಲ್ಲಿ ಬಾಲಕಿಯರ ತಂಡ ದ್ವಿತೀಯ ಸ್ಥಾನಗಳಿಸಿದೆ.

ವಿದ್ಯಾರ್ಥಿಗಳು ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ನಾಗಪ್ಪ ಅವರನ್ನು ಸಂಸ್ಥೆಯ ಅಧ್ಯಕ್ಷೆ ಉಮಾ ರಾಜೇಂದ್ರನ್, ಕಾರ್ಯದರ್ಶಿ ಸುರೇಶ್‌ನಾಯ್ಡು, ಸಂಚಾಲಕ ರಾಜೇಂದ್ರನ್, ಖಜಾಂಚಿ ಶ್ರೀದೇವಿ ಸುರೇಶ್‌ನಾಯ್ಡು, ಮುಖ್ಯ ಶಿಕ್ಷಕ ಮಧುಸೂದನ್ ಅಭಿನಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net