ಮೈಸೂರು ವಿವಿ, ಟೆರೇಷಿಯನ್ ಕಾಲೇಜಿಗೆ ಸಮಗ್ರ ಪ್ರಶಸ್ತಿ

Comprehensive award to Mysore University and Terasian College
Published on

ಮೈಸೂರು: ಮೈಸೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗ ನಗರದ ಓವಲ್ ಮೈದಾನದಲ್ಲಿ ಹಮ್ಮಿಕೊಂಡಿದ್ದ 2023-24ನೇ ಸಾಲಿನ ಅಂತರ ಕಾಲೇಜುಗಳ 94ನೇ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಯುವಕರ ವಿಭಾಗದಲ್ಲಿ ಮಾನಸಗಂಗೋತ್ರಿಯ ಸ್ನಾತಕೋತ್ತರ ಕ್ರೀಡಾ ಮಂಡಳಿ, ಯುವತಿಯರ ವಿಭಾಗದಲ್ಲಿ ಟೆರೇಷಿಯನ್ ಕಾಲೇಜು ಸಮಗ್ರ ಪ್ರಶಸ್ತಿ ಮುಡಿಗೇರಿಸಿಕೊಂಡಿತು.

ಯುವಕರ ವಿಭಾಗದಲ್ಲಿ ಮಾನಸಗಂಗೋತ್ರಿ ಸ್ನಾತಕೋತ್ತರ ಕ್ರೀಡಾ ಮಂಡಳಿಯ ಬಿ. ಮಹಾಂತೇಶ್, ಯುವತಿಯರ ವಿಭಾಗದಲಿ ್ಲಹಾಸನ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಕಾವ್ಯ ಅತ್ಯುತ್ತಮ ಅಥ್ಲೆಟ್ ಪ್ರಶಸ್ತಿಯನ್ನು ಪಡೆದುಕೊಂಡರು. ಕ್ರೀಡಾಕೂಟದಲ್ಲಿ ವಿಶ್ವವಿದ್ಯಾಲಯ ವ್ಯಾಪ್ತಿಯ ಸಂಯೋಜಿತ ಕಾಲೇಜುಗಳ 800ಕ್ಕೂ ಹೆಚ್ಚು ಯುವಕ ಹಾಗೂ ಯುವತಿಯರು ಪಾಲ್ಗೊಂಡಿದ್ದರು.

ಓವಲ್ ಮೈದಾನದಲ್ಲಿ ಶನಿವಾರ ಬಹುಮಾನ ವಿತರಣಾ ಸಮಾರಂಭ ಏರ್ಪಡಿಸಲಾಗಿತ್ತು. ಮೈಸೂರು ವಿಶ್ವವಿದ್ಯಾಲಯ ಕ್ರೀಡಾ ಮಂಡಳಿ ಸದಸ್ಯರಾದ ಪ್ರೊ.ಬಿ.ಎಸ್.ವಿಶ್ವನಾಥ್, ಅಂಶಿ ಪ್ರಸನ್ನ ಕುಮಾರ್, ಸಿಂಡಿಕೇಟ್ ಸದಸ್ಯರಾದ ಗೋಕುಲ್ ಗೋವರ್ಧನ್, ಡಾ.ಟಿ.ಆರ್.ಚಂದ್ರಶೇಖರ್, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಸಿ.ವೆಂಕಟೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net