

ಕಾಸರಗೋಡು: ಮಂಗಲ್ಪಾಡಿ ಸರ್ಕಾರಿ ಹೈಸ್ಕೂಲ್‌ನಲ್ಲಿ ನಡೆದ ಮಂಜೇಶ್ವರ ಉಪಜಿಲ್ಲಾಮಟ್ಟದ ಶಾಲಾ ಕಲೋತ್ಸವದಲ್ಲಿ ಕೊಡ್ಲಮೊಗರಿನ ಶ್ರೀ ವಾಣೀ ವಿಜಯ ಹೈಯರ್ ಸೆಕೆಂಡರಿ ಶಾಲೆ ಸಂಸ್ಕೃತೋತ್ಸವದಲ್ಲಿ 88 ಅಂಕಗಳೊಂದಿಗೆ ಸಮಗ್ರ ಚಾಂಪಿಯನ್‌ಷಿಪ್ ಪಡೆದಿದೆ.
ಸತತ ಮೂರನೇ ಬಾರಿಗೆ ಸಮಗ್ರ ಪ್ರಶಸ್ತಿಯನ್ನು ಶಾಲಾ ವಿದ್ಯಾರ್ಥಿಗಳು ತಮ್ಮದಾಗಿಸಿಕೊಂಡರು. ಹೈಸ್ಕೂಲ್ ಹಾಗೂ ಹೈಯರ್ ಸೆಕೆಂಡರಿ ವಿಭಾಗದ ಕನ್ನಡ ಕಲೋತ್ಸವದಲ್ಲೂ ಶಾಲೆ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ ಶಿಕ್ಷಕರನ್ನು ಮುಖ್ಯಶಿಕ್ಷಕಿ ಕೃಷ್ಣವೇಣಿ ಹಾಗೂ ಶಾಲಾ ಪ್ರಬಂಧಕ ಶಂಕರ ಮೋಹನ್ ಪೂಂಜ ಅಭಿನಂದಿಸಿದ್ದಾರೆ.