

ಹೊಳೆನರಸೀಪುರ: ಪಟ್ಟಣದ ಹೇಮಾವತಿ ಕ್ರೀಡಾಂಗಣದಲ್ಲಿ ಟಾಪರ್ಸ್ ಪದವಿ ಪೂರ್ವ ಕಾಲೇಜು, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಉಪ ನಿರ್ದೇಶಕರ ಕಚೇರಿ ಸಹಯೋಗದಲ್ಲಿ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟ ಯಶಸ್ವಿಯಾಗಿ ಜರುಗಿತು.
ಗುರುವಾರ ಹಾಗೂ ಶುಕ್ರವಾರ ಜರುಗಿದ ಕ್ರೀಡಾಕೂಟದಲ್ಲಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ, ಖೋ ಖೋನಲ್ಲಿ ಪ್ರಥಮ ಸ್ಥಾನ, ಥ್ರೋಬಾಲ್‌ನಲ್ಲಿ ಪ್ರಥಮ ಸ್ಥಾನ, ಷಟಲ್‌ನಲ್ಲಿ ಪ್ರಥಮ ಸ್ಥಾನ ಪಡೆಯುವ ಜತೆಗೆ ಚಾಂಪಿಯನ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು. ಕಾಲೇಜಿನ ವಿದ್ಯಾರ್ಥಿನಿ ಸುಶೀಲಾ ಅವರು ಚಕ್ರ ಎಸೆತದಲ್ಲಿ ಪ್ರಥಮ, ಗುಂಡು ಎಸೆತದಲ್ಲಿ ದ್ವಿತೀಯ ಮತ್ತು ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದು ವೈಯಕ್ತಿಕ ಚಾಂಪಿಯನ್ ಪ್ರಶಸ್ತಿ ತಮ್ಮದಾಗಿಸಿಕೊಂಡರು.
ಮಾನಸ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಬಾಲಕರ ವಿಭಾಗದಲ್ಲಿ ಖೋ ಖೋ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ, ವಾಲಿಬಾಲ್‌ನಲ್ಲಿ ಪ್ರಥಮ ಸ್ಥಾನ, ಬಾಲಕಿಯರ ವಿಭಾಗದಲ್ಲಿ ಕಬ್ಬಡಿ ಪ್ರಥಮ ಸ್ಥಾನ, ಖೋ ಖೋನಲ್ಲಿ ದ್ವಿತೀಯ ಸ್ಥಾನ ಪಡೆದು ಸಮಗ್ರ ಚಾಂಪಿಯನ್ ಪ್ರಶಸ್ತಿ ಪಡೆದರು. ಕಾಲೇಜಿನ ವಿದ್ಯಾರ್ಥಿ ಮದನ್ 800 ಮೀ. ಓಟ ದ್ವಿತೀಯ, 1500 ಮೀ. ಓಟ ದ್ವಿತೀಯ, 5 ಸಾವಿರ ಮೀ. ಓಟ ದ್ವಿತೀಯ ಸ್ಥಾನ ಪಡೆದು ಬಾಲಕರ ವಿಭಾಗದಲ್ಲಿ ವೈಯಕ್ತಿಯ ಚಾಂಪಿಯನ್ ಪ್ರಶಸ್ತಿ ಪಡೆದರು.
ಟಾಪರ್ಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಬಾಲಕರ ವಿಭಾಗದ ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ, ಥ್ರೋಬಾಲ್‌ನಲ್ಲಿ ಪ್ರಥಮ ಸ್ಥಾನ, ವಾಲಿಬಾಲ್‌ನಲ್ಲಿ ದ್ವಿತೀಯ ಸ್ಥಾನ, ಷಟಲ್‌ಬಾಲ್‌ನಲ್ಲಿ ದ್ವಿತೀಯ ಸ್ಥಾನ ಹಾಗೂ ಬಾಲಕಿಯರ ವಿಭಾಗದಲ್ಲಿ ವಾಲಿಬಾಲ್‌ನಲ್ಲಿ ದ್ವಿತೀಯ ಸ್ಥಾನ ಪಡೆದರು.
ಪಡುವಲಹಿಪ್ಪೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಬಾಲಕರ ವಿಭಾಗದ ಕಬಡ್ಡಿ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ, ಥ್ರೋಬಾಲ್‌ನಲ್ಲಿ ದ್ವಿತೀಯ ಸ್ಥಾನ, ಷಟನ್ ಬಾಲ್‌ಬ್ಯಾಡ್ಮಿಂಟನ್‌ನಲ್ಲಿ ಪ್ರಥಮ ಸ್ಥಾನ, ಟೆನಿಕಾಯ್ಟನಲ್ಲಿ ಪ್ರಥಮ ಸ್ಥಾನ ಮತ್ತು ಬಾಲಕಿಯರ ವಿಭಾಗದಲ್ಲಿ ವಾಲಿಬಾಲ್‌ನಲ್ಲಿ ಪ್ರಥಮ ಸ್ಥಾನ, ಥ್ರೋಬಾಲ್‌ನಲ್ಲಿ ದ್ವಿತೀಯ ಸ್ಥಾನ ಮತ್ತು ಷಟಲ್ ಬಾಲ್‌ನಲ್ಲಿ ದ್ವಿತೀಯ ಸ್ಥಾನ ಪಡೆದರು.
ದೊಡ್ಡಕಾಡನೂರು ಜೆಎಸ್‌ಎಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಬಾಲ್ ಬ್ಯಾಡ್ಮಿಂಟನ್‌ನಲ್ಲಿ ಪ್ರಥಮ ಸ್ಥಾನ ಹಾಗೂ ಟೆನಿಕಾಯ್ಟನಲ್ಲಿ ದ್ವಿತೀಯ ಸ್ಥಾನ ಪಡೆದರು.
ತಾತನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಬಾಲ್ ಬ್ಯಾಡ್ಮಿಂಟನ್‌ನಲ್ಲಿ ಪ್ರಥಮ ಸ್ಥಾನ, ಮೂಡಲಹಿಪ್ಪೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಬಾಲಕರ ವಿಭಾಗದ ಕಬಡ್ಡಿಯಲ್ಲಿ ದ್ವಿತೀಯ ಸ್ಥಾನ, ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ, ಪ್ರಿಯದರ್ಶಿನಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಖೋ ಖೋ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆದರು.
ದೈಹಿಕ ಶಿಕ್ಷಣ ಶಿಕ್ಷಕ ಪರಿವೀಕ್ಷಕ ಸುಜಾತಾ ಅಲಿ ನೇತೃತ್ವದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಹರೀಶ್ ಪಿ.ಎಲ್., ಪುಟ್ಟರಾಜು, ರವೀಂದ್ರ ಪ್ರಕಾಶ್, ಕೋಮಲಾವತಿ, ರವಿ ಸಿ.ಎಸ್., ರಾಜು ಪಿ., ಹಾಗೂ ಇತರರು ಕ್ರೀಡಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿ ಕ್ರೀಡಾಕೂಟವನ್ನು ಯಶಸ್ವಿಯಾಗಿ ನೆರವೇರಿಸಿ, ಪ್ರಶಂಸೆಗೆ ಪಾತ್ರರಾದರು.