ಮತ ಕ್ಷೇತ್ರದ ಸಮಗ್ರ ಅಭಿವೃದ್ಧಿ ನೀಲಿನಕ್ಷೆ

30 RON 1
Published on

ರೋಣ: ಪಟ್ಟಣವೂ ಸೇರಿದಂತೆ ಸವಡಿ ಗ್ರಾಮದಲ್ಲಿಯೂ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು. 56.37 ಕೋಟಿ ರೂ.ಗಳನ್ನು ಅಭಿವೃದ್ಧಿ ಕಾರ್ಯಗಳಿಗೆ ವಿನಿಯೋಗಿಸಲಾಗುವುದು ಎಂದು ಖನಿಜ ನಿಗಮದ ಅಧ್ಯಕ್ಷ, ಶಾಸಕ ಜಿ.ಎಸ್. ಪಾಟೀಲ ತಿಳಿಸಿದರು.

ಮಂಗಳವಾರ ರೋಣ ಪಟ್ಟಣ ಸೇರಿದಂತೆ ಸವಡಿ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಹಾಗೂ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ರೋಣದಲ್ಲಿ ನಿರುದ್ಯೋಗ ಯುವಕರಿಗೆ ಉದ್ಯೋಗ ನೀಡುವ ಜೆಟಿಟಿಸಿ ಮಹಾವಿದ್ಯಾಲಯದ ಕಟ್ಟಡ ನಿರ್ಮಾಣಕ್ಕೆ 50 ಕೋಟಿ ರೂ. ಬಿಡುಗಡೆಗೊಂಡಿದೆ. ಶೀಘ್ರದಲ್ಲೇ ಕಟ್ಟಡ ನಿರ್ಮಾಣವಾಗಲಿದೆ. ಅಕ್ಟೋಬರ್ ತಿಂಗಳಲ್ಲಿ ಪ್ರವೇಶ ಆರಂಭವಾಗಲಿದೆ ಎಂದು ತಿಳಿಸಿದರು.

ಸವಡಿ- ಹೊನ್ನಾಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಬ್ರೀಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ 2.50 ಕೋಟಿ ರೂ, ಶಾದಿ ಮಹಲ್ ನಿರ್ಮಾಣಕ್ಕೆ 1 ಕೋಟಿ, ಸವಡಿ ಗ್ರಾಮದ ಆರೋಗ್ಯ ಇಲಾಖೆ ಸಿಬ್ಬಂದಿ ವಸತಿ ಗೃಹಗಳ ನಿರ್ಮಾಣಕ್ಕೆ 97 ಲಕ್ಷ ರೂ., ಸ್ಮಶಾನ ಅಭಿವೃದ್ಧಿಗೆ 17 ಲಕ್ಷ ರೂ.ಗಳನ್ನು ಈಗಾಗಲೇ ಒದಗಿಸಲಾಗಿದೆ ಎಂದರು.

ಐ.ಎಸ್. ಪಾಟೀಲ, ಪುರಸಭೆ ಅಧ್ಯಕ್ಷೆ ಗೀತಾ ಮಾಡಲಗೇರಿ, ಉಪಾಧ್ಯಕ್ಷ ದುರ್ಗುಪ್ಪ ಹಿರೇಮನಿ, ಗ್ಯಾರಂಟಿ ಸಮಿತಿ ಅಧ್ಯಕ್ಷ ಸಂಗನಗೌಡ ಪಾಟೀಲ, ಅಕ್ಷಯ ಪಾಟೀಲ, ವೀರಣ್ಣ ಶೆಟ್ಟರ್, ಯೂಸುಪ್ ಇಟಗಿ, ಶರಣಪ್ಪ ಬೆಟಗೇರಿ, ಬಸವರಾಜ ನವಲಗುಂದ, ತಾಪಂ ಮಾಜಿ ಸದಸ್ಯ ಅಂದಪ್ಪ ಬಿಚ್ಚೂರ, ಪ್ರಭು ಮೇಟಿ, ಮುತ್ತಣ್ಣ ಸಂಗಳದ, ಆನಂದ ಚಂಗಳಿ, ಪ್ರಕಾಶ ಹೊಸಳ್ಳಿ, ಸೋಮು ನಾಗರಾಜ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net