ಬಂಗೂರನಗರ ಕಾಲೇಜ್​ಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ

22 dnd 2 SPORTS
Published on

ದಾಂಡೇಲಿ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ)ಹಾಗೂ ಹಳೇ ದಾಂಡೇಲಿ ಸರ್ಕಾರಿ ಪದವಿಪೂರ್ವ ಕಾಲೇಜ್ ಮತ್ತು ತಾಲೂಕಿನ ಎಲ್ಲ ಪಪೂ ಕಾಲೇಜುಗಳ ಆಶ್ರಯದಲ್ಲಿ ತಾಲೂಕು ಮಟ್ಟದ ಪಪೂ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟ ಮಂಗಳವಾರ ಜರುಗಿತು.

ಕ್ರೀಡಾಕೂಟ ಉದ್ಘಾಟಿಸಿ ತಹಸೀಲ್ದಾರ್ ಶೈಲೇಶ ಪರಮಾನಂದ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವ ಮುಖ್ಯ. ಸೋಲು -ಗೆಲುವಿನ ಬಗ್ಗೆ ಚಿಂತಿಸದೆ ಭಾಗವಹಿಸುವುದು ಮುಖ್ಯ ಎಂದರು.

ಕ್ರೀಡಾ ಜ್ಯೋತಿ ಬೆಳಗಿಸಿದ ಪೌರಾಯುಕ್ತ ರಾಜಾರಾಮ ಪವಾರ ಮಾತನಾಡಿ, ಕ್ರೀಡಾಪಟುಗಳು ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಭಾಗವಹಿಸಿ ಗೆಲುವು ಸಾಧಿಸುವ ಛಲ ಹೊಂದಿರಬೇಕು. ಅದನ್ನು ಸಾಕಾರಗೊಳಿಸಲು ಸಾಕಷ್ಟು ತಯಾರಿ ನಡೆಸಬೇಕು ಎಂದರು. ಪ್ರಾಂಶುಪಾಲರಾದ ನಾಗರೇಖಾ ಗಾಂವ್ಕರ ಅಧ್ಯಕ್ಷತೆ ವಹಿಸಿದ್ದರು. ನಗರದ ಬಂಗೂರನಗರ ಪಪೂ ಕಾಲೇಜ್ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದುಕೊಂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net