ನೇಮಕಾತಿಯಲ್ಲಿ ಜ್ಯೇಷ್ಠತೆ ಪರಿಗಣಿಸಲು ಒತ್ತಾಯ

1
Published on

ಮೈಸೂರು: ನಗರ ಪಾಲಿಕೆಯ 252 ಪೌರಕಾರ್ಮಿಕರ ಕಾಯಂ ನೇಮಕಾತಿ ಪ್ರಕ್ರಿಯೆ ವೇಳೆ ಪೌರಕಾರ್ಮಿಕರ ಜ್ಯೇಷ್ಠತೆಯನ್ನು ಪ್ರಧಾನವಾಗಿ ಪರಿಗಣಿಸುವಂತೆ ಒತ್ತಾಯಿಸಲು ಕರ್ನಾಟಕ ರಾಜ್ಯ ನಗರ ಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾ ಸಂಘದ ಜಿಲ್ಲಾ ಸಮಿತಿಯಿಂದ ನಿರ್ಣಯ ಕೈಗೊಳ್ಳಲಾಗಿದೆ.

ಪಡುವಾರಹಳ್ಳಿಯ ಬಾಬು ಜಗಜೀವನ್‌ರಾಂ ಭವನದಲ್ಲಿ ಬುಧವಾರ ಆಯೋಜಿಸಿದ್ದ ನೇಮಕಾತಿ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ನಾರಾಯಣ ಮಾತನಾಡಿ, ಪ್ರಸ್ತುತ ಮಹಾನಗರ ಪಾಲಿಕೆಯಲ್ಲಿ 1,300 ಪೌರಕಾರ್ಮಿಕರು ನೇರ ಪಾವತಿ ಮತ್ತು ಹೆಚ್ಚುವರಿ ಪಾವತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಪೈಕಿ 252 ಪೌರಕಾರ್ಮಿಕರು ಕಾಯಂಗೊಳ್ಳಲಿದ್ದಾರೆ. ಈ ವೇಳೆ ಪೌರಕಾರ್ಮಿಕರ ಜ್ಯೇಷ್ಠತೆ ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net