ಮಹದೇವಪ್ರಸಾದ್ ಬಡಾವಣೆಗೆ ಮೂಲ ಸೌಕರ್ಯ ಕಲ್ಪಿಸಲು ಒತ್ತಾಯ

15-GPT-3
Published on

ಚಾಮರಾಜನಗರ: ಗುಂಡ್ಲುಪೇಟೆ ಪಟ್ಟಣದ ಮಹದೇವಪ್ರಸಾದ್ ಬಡಾವಣೆಗೆ ಮೂಲ ಸೌಕರ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ಕಾವಲು ಪಡೆ ಸಂಘಟನೆ ಸದಸ್ಯರು ಬುಧವಾರ ಪುರಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.


ಸಂಘಟನೆಯ ತಾಲೂಕು ಅಧ್ಯಕ್ಷ ಅಬ್ದುಲ್ ಮಾಲೀಕ್ ಮಾತನಾಡಿ, ಬಡ ಹಾಗೂ ಮಧ್ಯಮ ವರ್ಗದ ಜನರೇ ವಾಸಿಸುವ ಬಡಾವಣೆಗೆ ಸಮರ್ಪಕ ಕುಡಿಯುವ ನೀರು ಹಾಗೂ ಚರಂಡಿಗಳಲ್ಲಿ ತುಂಬಿರುವ ಹೂಳೆತ್ತಿಸಿ ಸ್ವಚ್ಛತೆ ಕೈಗೊಳ್ಳಬೇಕು. ಬಡಾವಣೆಯು ಸುಲ್ತಾನ್‌ಬತ್ತೇರಿ ರಸ್ತೆಯಲ್ಲಿರುವುದರಿಂದ ಉದ್ಯಾನವನ ಹಾಗೂ ಸ್ವಾಗತ ಕಮಾನು ನಿರ್ಮಿಸಿ ಪಟ್ಟಣದ ಸೌಂದರ್ಯ ಹೆಚ್ಚಿಸಲು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ ಮನವಿ ಪತ್ರವನ್ನು ಮುಖ್ಯಾಧಿಕಾರಿ ವಸಂತಕುಮಾರಿ ಅವರಿಗೆ ಸಲ್ಲಿಸಿದರು.


ಈ ಸಂದರ್ಭದಲ್ಲಿ ಸದಸ್ಯರಾದ ರಾಮೇಗೌಡ, ಮುಬಾರಕ್, ಸಾದಿಕ್ ಪಾಷಾ, ಶಕೀಲ್, ಮುದ್ದಯ್ಯ, ರಾಜು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net