ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಿ

18-GPT-2
Published on

ಗುಂಡ್ಲುಪೇಟೆ: ಇತ್ತೀಚಿನ ದಿನಗಳಲ್ಲಿ ಎಲ್ಲ ಕ್ಷೇತ್ರದಲ್ಲಿಯೂ ಮಹಿಳೆಯರು ಗಣನೀಯ ಸಾಧನೆ ಮಾಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದ್ದು, ಪಾಲಕರು ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು ಎಂದು ಬ್ರಾಹ್ಮಣ ಮಹಾಸಭಾ ತಾಲೂಕು ಅಧ್ಯಕ್ಷ ಕೆ.ವಿ.ಗೋಪಾಲಕೃಷ್ಣ ಭಟ್ ಸಲಹೆ ನೀಡಿದರು.


ವಿಪ್ರ ಮಹಾಸಭಾ ವತಿಯಿಂದ ಸೋಮವಾರ ಪಟ್ಟಣದ ಶ್ರೀರಾಮಮಂದಿರದಲ್ಲಿ ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದಲ್ಲಿ ಅರ್ಥಿಕವಾಗಿ ಮುಂದೆ ಬರಲು ಶಿಕ್ಷಣ ಪಡೆಯುವುದು ಅನಿವಾರ್ಯವಾಗಿದೆ. ಅಖಿಲ ಕರ್ನಾಟಕ ಬ್ರಾಹ್ಮಣ ಸಭಾ ವತಿಯಿಂದ ಮಹಿಳೆಯರು ಸ್ವಯಂ ಉದ್ಯೋಗ ಮಾಡಲು ಅರ್ಥಿಕ ನೆರವು ನೀಡಲಾಗುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.


ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಬಹುಮಾನ ನೀಡಿ ಸನ್ಮಾನಿಸಲಾಯಿತು. ತಾಲೂಕು ವಿಪ್ರ ಮಹಿಳಾ ಬಳಗದ ಅಧ್ಯಕ್ಷೆ ಗಾಯತ್ರಿ ಅನಂತು, ಮಂಜುಳಾ, ಶ್ರೀಮತಿ, ಮಾಲಾ ನಾಗರಾಜು, ಅನುಪಮಾ ಶರ್ಮ, ಭಾರತಿ ರಾಜಣ್ಣ , ಲಕ್ಷ್ಮೀ ಅಶ್ವತ್ಥ್, ಜ್ಯೋತಿ ಲಕ್ಷ್ಮೀ, ಭಾಗ್ಯಮ್ಮ, ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷ ರವಿಕಾಂತ್, ಮಂಜುನಾಥ್, ಕೌಂಡಿನ್ಯ ವಿಪ್ರ ಬಳಗದ ಅಧ್ಯಕ್ಷ ಅನಂದ್ ಕುಮಾರ್ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net