

ಮಡಿಕೇರಿ:
ಮಹಾವೀರ ಚಕ್ರ ಪುರಸ್ಕöÈತ ಸ್ಕಾ÷್ವಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಪುಣ್ಯ ಸ್ಮರಣೆಯ ಅಂಗವಾಗಿ ನಡೆದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಗುರುವಾರ ಬಹುಮಾನ ವಿತರಣೆ ಮಾಡಲಾಯಿತು. ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆ ಹಾಗೂ ಕೊಡವ ಮಕ್ಕಡ ಕೂಟದ ವತಿಯಿಂದ ಪತ್ರಿಕಾ ಭವನದ ಸಭಾಂಗಣದಲ್ಲಿ ನಡೆದ ಬಹುಮಾನ ವಿತರಣಾ ಕಾರ್ಯಕ್ರಮವನ್ನು ನಿವೃತ್ತ ಗ್ರೂಪ್ ಕ್ಯಾಪ್ಟನ್ ಕಂಬೇಯAಡ ಅಯ್ಯಪ್ಪ ಕಾರ್ಯಪ್ಪ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಸ್ಕಾ÷್ವಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಮರಣೋತ್ತರವಾಗಿ ಮಹಾವೀರ ಚಕ್ರ ಪಡೆದ ಭಾರತೀಯ ವಾಯುಪಡೆಯ ಮೊದಲ ಅಧಿಕಾರಿ. ಭಾರತ-ಪಾಕಿಸ್ತಾನ ನಡುವಿನ ಯುದ್ಧದಲ್ಲಿ ಹಾರುವ ಬೆಂಕಿ ಎಂಬ ಖ್ಯಾತಿ ಪಡೆದಿದ್ದರು. ಪಾಕಿಸ್ತಾನದ ಸರ್ಗೊಡ ವಾಯುನೆಲೆಯ ಮೇಲೆ ದಾಳಿ ನಡೆದ ಸಂದರ್ಭ ಅನುಮಾನಾಸ್ಪದವಾಗಿ ಕಣ್ಮರೆಯಾಗಿದ್ದರು.
ಆದರೆ ಹಲವು ವರ್ಷಗಳ ಬಳಿಕ ಅವರು ಸಾವನ್ನಪ್ಪಿರುವುದಾಗಿ ತಿಳಿದು ಬಂತು. ದೇಶಕ್ಕಾಗಿ ಹೋರಾಡಿ ವೀರ ಮರಣವನ್ನಪ್ಪಿದ ದೇವಯ್ಯ ಅವರ ಸಾಹಸಗಾಥೆಯನ್ನು ಇಂದಿನ ಯುವ ಜನತೆ ತಿಳಿದುಕೊಳ್ಳಬೇಕು. ದೇವಯ್ಯ ಅವರು ಕೊಡಗಿನವರು ಎಂಬುವುದು ನಮ್ಮೆಗೆಲ್ಲರಿಗೂ ಹೆಮ್ಮೆ ಎಂದು ಹೇಳಿದರು.
ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮಾಥ್ಯು ಮಾತನಾಡಿ, ದೇಶವನ್ನು ರಕ್ಷಿಸುವ ಸೈನಿಕರು ಹಾಗೂ ವೀರ ಮರಣವನ್ನಪ್ಪಿದÀ ಹುತಾತ್ಮರ ಬಗ್ಗೆ ತಿಳಿದುಕೊಳ್ಳುವುದು ಅತ್ಯವಶ್ಯಕ. ಮಕ್ಕಳು ಶಾಲೆಯ ಪಠ್ಯವನ್ನು ಮಾತ್ರವಲ್ಲದೇ ದೇಶಕ್ಕಾಗಿ ಸೇವೆ ಸಲ್ಲಿಸಿ ಬಲಿದಾನಗೈದವರ ವಿಚಾರಗಳನ್ನು ತಿಳಿದುಕೊಂಡು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದರು.
ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ, ಸ್ಕೌಟ್ಸ್ ಮತ್ತು ಗೈಡ್ಸ್ ಮಡಿಕೇರಿ ಸಂಸ್ಥೆಯ ಅಧ್ಯಕ್ಷ ಬಿ.ಎನ್.ರಮೇಶ್ ಮಾತನಾಡಿದರು.
ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿಯ ಅಧ್ಯಕ್ಷ ಡಾ. ಉಳ್ಳಿಯಡ ಎಂ.ಪೂವಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಮಡಿಕೇರಿ ಸಮಿತಿ ಕಾರ್ಯದರ್ಶಿ ಅಜ್ಜಮಕ್ಕಡ ವಿನುಕುಶಾಲಪ್ಪ, ಪ್ರೆಸ್‌ಕ್ಲಬ್ ಹಿರಿಯ ಉಪಾಧ್ಯಕ್ಷ ಚಂದ್ರಮೋಹನ್, ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್ ಗುಹ್ಯ, ನಿರ್ದೇಶಕ ದಿವಾಕರ್ ಮತ್ತಿತರರು ಇದ್ದರು.
ಪ್ರಬಂಧ ಸ್ಪರ್ಧೆ ವಿಜೇತರು :
ಪ್ರಬಂಧ ಸ್ಪರ್ಧೆಯಲ್ಲಿ ಸ್ಕೌಟ್ಸ್ ವಿಭಾಗದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್ ನ ಆರವ್ ಬೋಪಣ್ಣ ಪ್ರಥಮ, ಅರಮೇರಿ ಕಳಂಚೇರಿ ಶಾಲೆಯ ಕುನಲ್ ಪ್ರಸಾದ್ ದ್ವಿತೀಯ ಹಾಗೂ ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್ ನ ಕೆ.ಎಸ್.ಶೋಬಿತ್ ತೃತೀಯ ಬಹುಮಾನ ಪಡೆದÀರು.
ಗೈಡ್ಸ್ ವಿಭಾಗದಲ್ಲಿ ಸಂತ ಮೈಕಲರ ಶಾಲೆಯ ಕೆ.ಎಲ್.ಸೇಹ ಪ್ರಥಮ, ಜನರಲ್ ತಿಮ್ಮಯ್ಯ ಶಾಲೆಯ ಜಶ್ಮೀರಾ ಬೋಪಣ್ಣ ದ್ವಿತೀಯ ಹಾಗೂ ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್‌ನ ಪಿ.ಲಕ್ಷ ದಿನೇಶ್ ತೃತೀಯ ಬಹುಮಾನ ಗಳಿಸಿದರು.